ಪಾಕಿಸ್ತಾನ : ಕಹಾರ್ ಬಳಿ ಅಪಘಾತ – ಬಸ್ ಕಮರಿಗೆ ಬಿದ್ದು 14 ಮಂದಿ ಸಾವು, 46 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪಾಕಿಸ್ತಾನದ ಕಲ್ಲರ್ ಕಹಾರ್ ಬಳಿ ಲಾಹೋರ್-ಇಸ್ಲಾಮಾಬಾದ್ ಮೋಟಾರ್‌ ಮಾರ್ಗದಲ್ಲಿ ಭಾನುವಾರ ರಾತ್ರಿ ಬಸ್ ಪಲ್ಟಿಯಾದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ ಮತ್ತು 46 ಮಂದಿ ಗಾಯಗೊಂಡಿದ್ದಾರೆ.

ಮದುವೆ ಸಮಾರಂಭಕ್ಕೆ ತೆರಳಿದ್ದವರು ಇಸ್ಲಾಮಾಬಾದ್‌ನಿಂದ ಲಾಹೋರ್‌ಗೆ ಹಿಂತಿರುವ ವೇಳೆ ಬಸ್‌ ಎರಡು ಕಾರುಗಳು ಮತ್ತು ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಟೈರ್ ಸ್ಫೋಟಗೊಂಡ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

13 ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಉಳಿದವರನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಪೊಲೀಸ್ ವಕ್ತಾರ ಹೇಳಿದ್ದಾರೆ.

ಬಸ್‌ನಲ್ಲಿ 49 ಜನರು ಪ್ರಯಾಣಿಸುತ್ತಿದ್ದರು ಮತ್ತು ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!