ಹೊಸದಿಗಂತ ಡಿಜಿಟಲ್ ಡೆಸ್ಕ್:
ಡೆಂಗ್ಯೂ ಅಟ್ಟಹಾಸಕ್ಕೆ ಬಾಂಗ್ಲಾದೇಶದಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಈವರೆಗೆ ಡೆಂಗ್ಯೂಗೆ 387 ಮಂದಿ ಬಲಿಯಾಗಿದ್ದಾರೆ.
ಬಾಂಗ್ಲಾದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಡೆಂಗ್ಯೂನಿಂದ 14 ಮಂದಿ ಸಾವನ್ನಪ್ಪಿದ್ದಾರೆ ಎಂದು ಶನಿವಾರ ವರದಿಯಾಗಿದೆ. ಈ ಮೂಲಕ ದೇಶದಲ್ಲಿ ಸೊಳ್ಳೆಯಿಂದ ಹರಡುವ ರೋಗದಿಂದ ಸಾವನ್ನಪ್ಪಿರುವವರ ಸಂಖ್ಯೆ 387ಕ್ಕೆ ಏರಿದೆ ಎಂದು ಬಾಂಗ್ಲಾದೇಶ ಮೂಲದ ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ.
ಅದಾಗ್ಯೂ ಪ್ರಸ್ತುತ 2,432 ಮಂದಿ ವೈರಲ್ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ (ಡಿಜಿಎಚ್‌ಎಸ್) ತಿಳಿಸಿದೆ.
ಹೊಸ ರೋಗಿಗಳಲ್ಲಿ 740 ಮಂದಿ ಢಾಕಾದ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು ಉಳಿದವರನ್ನು ಬಾಂಗ್ಲಾದೇಶದ ಇತರ ಭಾಗಗಳಲ್ಲಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು DGHS ತಿಳಿಸಿದೆ.
ಬಾಂಗ್ಲಾದೇಶದಲ್ಲಿ 4,423 ಸೇರಿದಂತೆ ಒಟ್ಟು 9,830 ಡೆಂಗ್ಯೂ ರೋಗಿಗಳು ದೇಶಾದ್ಯಂತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಲ್ಲಿಯವರೆಗೆ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ (ಡಿಜಿಎಚ್‌ಎಸ್) 82,506 ಡೆಂಗ್ಯೂ ಪ್ರಕರಣಗಳನ್ನು ದಾಖಲಿಸಿದೆ ಮತ್ತು 72,289 ಮಂದಿ ಡೆಂಗ್ಯೂನಿಂದ ಚೇತರಿಸಿಕೊಂಡಿದ್ದಾರೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ.