ಬೀದರ್‌ನಲ್ಲಿ ಮತ್ತೊಂದು ಅವಘಡ: ಕಲುಷಿತ ನೀರು ಕುಡಿದು 14 ಜನ ಅಸ್ವಸ್ಥ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಇತ್ತೀಚೆಗೆ ಕಲುಷಿತ ನೀರು ಸೇವಿಸಿ ಜನ ಅಸ್ವಸ್ಥಗೊಂಡ ಘಟನೆ ವರದಿಯಾಗಿತ್ತು. ಅದರ ಬೆನ್ನಲ್ಲೇ ಇದೀಗ ಅಂತಹುದೇ ಮತ್ತೊಂದು ಘಟನೆ ವರದಿಯಾಗಿದೆ.

ಕಲುಷಿತ ನೀರು ಸೇವಿಸಿ 14 ಜನ ಅಸ್ವಸ್ಥಗೊಂಡ ಘಟನೆ ಬೀದರ್ ತಾಲೂಕಿನ ಬರೀದಾಬಾದ್ ಗ್ರಾಮದಲ್ಲಿ ನಡೆದಿದೆ. ಸದ್ಯ ಅಸ್ವಸ್ಥರನ್ನು ಬ್ರೀಮ್ಸ್ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಳೆ ಸುರಿಯುತ್ತಿರುವ ಹಿನ್ನೆಲೆ ಜೆಜೆಎಂ ಕಾಮಗಾರಿ ಅವಾಂತರದಿಂದ ಪೈಪ್ ಲೈನ್ ಸೋರಿಕೆಯಾಗಿದೆ. ಅದನ್ನು ಕುಡಿದ ಗ್ರಾಮಸ್ಥರಲ್ಲಿ ವಾಂತಿ ಭೇದಿ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.

ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹಾಗೂ ಸಚಿವ ಈಶ್ವರ ಖಂಡ್ರೆ, ರಹೀಮ್ ಭೇಟಿ ನೀಡಿ ಆರೋಗ್ಯ ವಿಚಾರಣೆ ನಡೆಸಿದ್ದಾರೆ. ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡವರು ಆಸ್ಪತ್ರೆಯ ಖರ್ಚನ್ನು ಸರ್ಕಾರವೇ ಭರಿಸಬೇಕೆಂದು ಶಾಸಕ ಡಾ. ಶೈಲೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುವುದಾಗಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!