ಗುಜರಾತ್‌ನಲ್ಲಿ ಮಳೆಯ ಅಬ್ಬರಕ್ಕೆ ಈವರೆಗೂ 14 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗುಜರಾತ್‌ನ ಹಲವು ಭಾಗಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಮುಂದಿನ ಕೆಲವು ದಿನಗಳಲ್ಲಿ ರಾಜ್ಯದಾದ್ಯಂತ 50-60 ಕಿಮೀ ವೇಗದಲ್ಲಿ ಗುಡುಗು ಸಹಿತ ಬೀರುಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದ 253 ತಾಲೂಕುಗಳ ಪೈಕಿ 168 ತಾಲೂಕುಗಳಲ್ಲಿ ಅಕಾಲಿಕ ಮಳೆಯಾಗಿದೆ, ಖೇಡಾ, ಗಾಂಧಿನಗರ, ಮೆಹ್ಸಾನಾ ಮತ್ತು ವಡೋದರಾ ಜಿಲ್ಲೆಗಳಲ್ಲಿ 25 ರಿಂದ 40 ಮಿಮೀ ಮಳೆಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (ಎಸ್‌ಇಒಸಿ) ಹೇಳಿಕೆಯಲ್ಲಿ ತಿಳಿಸಿದೆ.

ಬಿರು ಗಾಳಿಗೆ ಮರಗಳು, ಹೋರ್ಡಿಂಗ್‌ಗಳು ನೆಲಕ್ಕುರಳಿದ್ದು, ಹಲವು ಜಿಲ್ಲೆಗಳಲ್ಲಿ ಮನೆಗಳು ಕುಸಿದುಬಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!