ರಾಜ್ಯ ಮಟ್ಟದಲ್ಲಿ ಅಲ್ಪಸಂಖ್ಯಾತರ ಗುರುತು ಪತ್ತೆಗೆ ರಾಜ್ಯಗಳು ಸಜ್ಜು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಮಟ್ಟದಲ್ಲಿ ಅಲ್ಪಸಂಖ್ಯಾತರನ್ನು ಗುರುತಿಸುವ ವಿಚಾರದಲ್ಲಿ 14 ರಾಜ್ಯಗಳು ಸಜ್ಜುಗೊಂಡಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

ಈ ವಿಚಾರವಾಗಿ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳು ಇತರ ಪಾಲುದಾರರೊಂದಿಗೆ ಸಮಾಲೋಚನಾ ಸಭೆ ನಡೆಸಿದ್ದು, ಈ ಬಗ್ಗೆ 14 ರಾಜ್ಯಗಳು ಸಜ್ಜುಗೊಂಡಿವೆ. ಉಳಿದ 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಯಾವುದೇ ಅಭಿಪ್ರಾಯ ನೀಡಿಲ್ಲ. ಇದು ಸೂಕ್ಷ್ಮ ವಿಚಾರವಾದ್ದರಿಂದ ವಿಷಯವನ್ನು ಅಂತಿಮಗೊಳಿಸಲು ಇನ್ನೂ ಸ್ವಲ್ಪ ಸಮಯವನ್ನು ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಮನವಿ ಮಾಡಿದೆ.

ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಮತ್ತು ಎ.ಎಸ್.ಓಕಾ ಅವರನ್ನೊಳಗೊಂಡ ಪೀಠವು ತನ್ನ ನಿಲುವನ್ನು ತಿಳಿಸಲು ಕೇಂದ್ರಕ್ಕೆ 6 ವಾರಗಳ ಕಾಲಾವಕಾಶ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!