ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 14 ವರ್ಷದ ಬಾಲಕಿಯ ಶವ ಬುಧವಾಹ ಪತ್ತೆಯಾಗಿದ್ದು, ಅತ್ಯಾಚಾರ ನಡೆಸಿ, ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಬಾಲಕಿ ಪೋಷಕರು ಕೊಪ್ಪಳ ಮೂಲದವರಾಗಿದ್ದು, ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆಂದು ತಿಳಿದುಬಂದಿದೆ.
ರಾಮನಗರ ಎಸ್ಪಿ ಆರ್ ಶ್ರೀನಿವಾಸ್ ಗೌಡ ಅವರು ಮಾತನಾಡಿ, ಬಾಲಕಿಯ ಪೋಷಕರು ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ಪ್ರಸ್ತುತ ಈ ಅಪರಾಧವನ್ನು ಕೊಲೆ ಪ್ರಕರಣವೆಂದು ಪರಿಗಣಿಸಲಾಗುತ್ತಿದ್ದು, ಕೊಲೆಗೆ ಮುನ್ನ ಆಕೆಯ ಮೇಲೆ ಅತ್ಯಾಚಾರ ನಡೆದಿದೆಯೇ ಎಂಬುದು ಮರಣೋತ್ತರ ಪರೀಕ್ಷೆಯ ನಂತರ ತಿಳಿದುಬರಲಿದೆ ಎಂದು ಹೇಳಿದ್ದಾರೆ.
ಬುಧವಾರ ಮಧ್ಯಾಹ್ನ 1 ರಿಂದ 2 ಗಂಟೆಯ ನಡುವೆ ಘಟನೆ ನಡೆದಿರುವ ಶಂಕೆಗಳಿವೆ. ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದು, ಈ ವೇಳೆ ಮನೆಗೆ ನುಗ್ಗಿರುವ ಆರೋಪಿಗಳು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ನಂತರ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಗ್ಯಾಸ್ ಸಿಲಿಂಡರ್ನಿಂದ ತಲೆಗೆ ಹೊಡೆದು ಪರಾರಿಯಾಗಿದ್ದಾರೆಂದು ಶಂಕಿಸಲಾಗಿದೆ.