Tuesday, October 14, 2025

140 ಕೋಟಿ ದೇಶವಾಸಿಗಳೇ ನನ್ನ ಏಕೈಕ ರಿಮೋಟ್‌ ಕಂಟ್ರೋಲ್‌: ಪ್ರಧಾನಿ ಮೋದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

140 ಕೋಟಿ ದೇಶವಾಸಿಗಳು ನನ್ನ ಏಕೈಕ ರಿಮೋಟ್‌ ಕಂಟ್ರೋಲ್‌ ಅಂತ ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಅಸ್ಸಾಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಮೋದಿ, 140 ಕೋಟಿ ಭಾರತೀಯರು ನನ್ನ ಏಕೈಕ ರಿಮೋಟ್‌ ಕಂಟ್ರೋಲ್‌ ಎಂದರು.

ವಿಶ್ವದಲ್ಲಿ ಭಾರತ ವೇಗವಾಗಿ ಬೆಳೆಯುತ್ತಿರುವ ದೇಶವಾಗಿದೆ, ಅಸ್ಸಾಂ ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ರಾಜ್ಯಗಳಲ್ಲಿ ಒಂದಾಗಿದೆ. ಒಂದು ಕಾಲದಲ್ಲಿ ಹೆಣಗಾಡುತ್ತಿದ್ದ ಅಸ್ಸಾಂ ಈಗ ಗಮನಾರ್ಹ ಬೆಳವಣಿಗೆ ಸಾಧಿಸುತ್ತಿದೆ. 13% ಬೆಳವಣಿಗೆಯ ದರ ಹೊಂದಿದೆ. ಇದು ಅಸ್ಸಾಂ ಜನರ ಕಠಿಣ ಶ್ರಮ ಹಾಗೂ ಬಿಜೆಪಿ ಡಬಲ್ ‌ಎಂಜಿನ್ ‌ಸರ್ಕಾರದ ಫಲಿತಾಂಶವೂ ಆಗಿದೆ ಎಂದು ನುಡಿದರು.

ಅಂದು ದಶಕಗಳ ಕಾಲ ಅಸ್ಸಾಂ ಆಳಿದ ಕಾಂಗ್ರೆಸ್ ಪಕ್ಷವು ಬ್ರಹ್ಮಪುತ್ರ ನದಿಗೆ ಕೇವಲ 3 ಸೇತುವೆಗಳನ್ನು ನಿರ್ಮಿಸಿತು, ಆದ್ರೆ ನಾವು ಕಳೆದ 10 ವರ್ಷಗಳಲ್ಲಿ 6 ಸೇತುವೆಗಳನ್ನು ನಿರ್ಮಿಸಿದ್ದೇವೆ ಎಂದು ಹೇಳಿದರು.

error: Content is protected !!