ಆಳಂದ ತಾಲೂಕಿನಾದ್ಯಂತ 144 ನಿಷೇಧಾಜ್ಞೆ ಜಾರಿಗೊಳಿಸಿ: ಡಿಸಿ ಆದೇಶ

ಹೊಸದಿಗಂತ ವರದಿ, ಕಲಬುರಗಿ:

ಮಾರ್ಚ್ 1 ರಂದು ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಸಂದಲ್ ಹಾಗೂ ಶಬ್-ಎ-ಬರಾತ್ ಕಾರ್ಯಕ್ರಮವು ನಡೆಯಲಿದೆ. ಅದೇ ದಿನ ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ದರ್ಗಾದ ಅವರಣದಲ್ಲಿನ ರಾಘವ ಚೈತನ್ಯ ಶಿವಲಿಂಗದ ಶುದ್ದೀಕರಣ ಕಾರ್ಯಕ್ರಮ ಹಮ್ಮಿಕೊಂಡಿರುವ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಹಾಗೂ ಹಿಂದೂ ಭಕ್ತರು ಭಾಗವಹಿಸುವುದರಿಂದ ಪಟ್ಟಣದಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮತ್ತು ತಾಲೂಕಿನಾದ್ಯಂತ ಶಾಂತಿ ಸುವ್ಯಸ್ಥೆ ಕಾಪಾಡಲು ಫೆ.27 ರ ಬೆಳಿಗ್ಗೆ 6 ಗಂಟೆಯಿಂದ ಮಾ‌.3ರ ಬೆಳಿಗ್ಗೆ 6 ಗಂಟೆ ವರೆಗೆ ಸಿ.ಆರ್.ಪಿ.ಸಿ ಕಾಯ್ದೆ-1973ರ ಕಲಂ 144, 144ಎ ರನ್ವಯ ಆಳಂದ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!