ಬೆಂಗಳೂರು ನಗರದಲ್ಲಿ ಜನವರಿ 31ರವರೆಗೆ 144 ಸೆಕ್ಷನ್ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊರೋನಾ ನಿಯಂತ್ರಿಸಲು ಬೆಂಗಳೂರು ನಗರದಲ್ಲಿ ಜಾರಿಯಲ್ಲಿರುವ 144 ಸೆಕ್ಷನ್​ನ ಜನವರಿ 31ರವರೆಗೂ ವಿಸ್ತರಿಸಿ ನಗರ ಪೊಲೀಸ್ ಆಯುಕ್ತರಾದ ಕಮಲ್​ ಪಂತ್​ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಜನಸಂಚಾರ ದಟ್ಟಣೆ ನಿಯಂತ್ರಿಸಲು ಜನವರಿ 6ರಿಂದ 19ರವರೆಗೂ 144 ಸೆಕ್ಷನ್ ಜಾರಿಗೊಳಿಸಿದ್ದರು. ಇದೀಗ ಜನವರಿ 31ರವರೆಗೂ ವಿಸ್ತರಿಸಲಾಗಿದೆ. ಈ ಅವಧಿಯಲ್ಲಿ ಪ್ರತಿಭಟನೆ, ರ‍್ಯಾಲಿ, ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಈ ವೇಳೆ ಕಾನೂನು ನಿಯಮ ಉಲ್ಲಂಘನೆ ಕಂಡು ಬಂದರೆ ಅಂತವರ ವಿರುದ್ಧ ಐಪಿಸಿ ಸೆಕ್ಷನ್ 188, ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು‌ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!