Saturday, June 25, 2022

Latest Posts

ಅಫಘಾನಿಸ್ತಾನದಿಂದ ಸುರಕ್ಷಿತವಾಗಿ ದೆಹಲಿಗೆ ಬಂದಿಳಿದ 146 ಮಂದಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿaತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅಫಘಾನಿಸ್ತಾನದಿಂದ ಸ್ಥಳಾಂತರಗೊಂಡ 146 ಮಂದಿ ವಿವಿಧ ವಿಮಾನಗಳಲ್ಲಿ ಸುರಕ್ಷಿತವಾಗಿ ರಾಷ್ಟ್ರ ರಾಜಧಾನಿ ದೆಹಲಿಗೆ ಬಂದಿಳಿದಿದ್ದಾರೆ.

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನ್ನು ತಾಲಿಬಾನ್ ವಶಕ್ಕೆಪಡೆದ ನಂತರ ಅಲ್ಲಿರುವ ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಪ್ರಯತ್ನಿಸಲಾಗುತ್ತಿದೆ. ಭಾನುವಾರ ಐಎಎಫ್ ನ ಸೇನಾ ಸಾರಿಗೆ ವಿಮಾನದಲ್ಲಿ 107 ಭಾರತೀಯರು ಸೇರಿದಂತೆ 168 ಜನರನ್ನು ಸ್ಥಳಾಂತರಿಸಲಾಗಿದೆ .

ಏತನ್ಮಧ್ಯೆ ಅಮೆರಿಕ ಅಫ್ಘಾನಿಸ್ತಾನದಿಂದ 30 ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸುವಲ್ಲಿ ಯಶಸ್ವಿಯಾಗಿದ್ದು, ಇನ್ನೂ ಸಿಲುಕಿಕೊಂಡಿರುವ ಅಮೆರಿಕನ್ನರಿಗೆ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಕೆಲವು ಅಫಘಾನ್ ಸ್ಥಳಗಳಿಂದ  ಸಾವು, ಸಷ್ಟವಿಲ್ಲದೇ ಜನರನ್ನು ಸ್ಥಳಾಂತರಿಸಲು ಯಾವುದೇ ಮಾರ್ಗವಿಲ್ಲ ಎಂದು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss