Saturday, August 13, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 148 ಮಂದಿಗೆ ಕೊರೋನಾ ಸೋಂಕು ದೃಢ

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಶನಿವಾರ 148 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಪೈಕಿ 119 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 100 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲಿ 3792 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಇದರಲ್ಲಿ 3418 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ರಾಜ್ಯದಲ್ಲಿ 4650 ಜನರು ಗುಣಮುಖರಾದರು.
ಕಲ್ಲಿಕೋಟೆ ಜಿಲ್ಲೆಯಲ್ಲಿ 519, ತೃಶೂರು 416, ಎರ್ನಾಕುಳಂ 415, ಕೊಲ್ಲಂ 411, ಮಲಪ್ಪುರಂ 388, ಆಲಪ್ಪುಳ 308, ಪತ್ತನಂತ್ತಿಟ್ಟ 270, ತಿರುವನಂತಪುರ 240, ಕೋಟ್ಟಾಯಂ 236, ಕಣ್ಣೂರು 173, ಕಾಸರಗೋಡು 148, ಪಾಲಕ್ಕಾಡು 115, ವಯನಾಡು 82, ಇಡುಕ್ಕಿ ಜಿಲ್ಲೆಯಲ್ಲಿ 71 ಜನರಿಗೆ ಕೊರೋನಾ ಸೋಂಕು ದೃಢಗೊಂಡಿದೆ. ಈ ಮಧ್ಯೆ ಕೋವಿಡ್ ವೈರಸ್ ಬಾಧಿಸಿ ಕೇರಳದಲ್ಲಿ ಶನಿವಾರ 18 ಮಂದಿ ಸಾವಿಗೀಡಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss