Wednesday, August 10, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 149 ಮಂದಿಗೆ ಕೊರೋನಾ ಸೋಂಕು ದೃಢ

ಹೊಸದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಸೋಮವಾರ 149 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 137 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 135 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಎರಡು ಸಾವು ಸಂಭವಿಸಿದೆ.
ಕೇರಳದಲ್ಲಿ 6664 ಹೊಸ ಪ್ರಕರಣ
ಕೇರಳದಲ್ಲಿ ಸೋಮವಾರ ಹೊಸದಾಗಿ 6664 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 6356 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 9010 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 53 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಭಾನುವಾರ ಶೇಕಡಾ 10.79 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss