Sunday, August 14, 2022

Latest Posts

15 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ: ಆರೋಪಿ ಬಂಧನ

ಬಲ್ಲಿಯಾ :ಸಿಕಂದರಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 15 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಘಟನೆಯೊಂದು ಬೆಳಕಿಗೆ ಬಂದಿದೆ.

ಬಾಲಕಿಯನ್ನು ಶುಕ್ರವಾರ ರಾಸ್ರಾ ಬಸ್ ನಿಲ್ದಾಣದಿಂದ  ರಕ್ಷಿಸಲಾಗಿದ್ದು, ಆರೋಪಿ 23 ವರ್ಷದ ಆಸಿಫ್ ನನ್ನು ಬಂಧಿಸಲಾಗಿದೆ ಎಂದು ಸಿಕಂದರ್ ಪುರ ಎಸ್ ಎಚ್ ಓ ಅಮರ್ ಜೀತ್ ಯಾದವ್ ತಿಳಿಸಿದ್ದಾರೆ.

ಬಾಲಕಿಯನ್ನು ಬುಧವಾರ ಆಸಿಫ್ ಅಪಹರಿಸಿ ಅತ್ಯಾಚಾರ ಎಸಗಿದ್ದ ಎಂದು ಸ್ಥಳೀಯ ಮಾಧ್ಯಮಗಳಿಗೆ ತನಿಖಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಮಾದ್ಯಮ ಮೂಲಗಳು ತಿಳಿಸಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss