ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಮತ್ತು ಮಹಾರಾಷ್ಟ್ರದ ಹಲವೆಡೆ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ದಾಳಿ ನಡೆಸಿದ ವೇಳೆ ಹಮಾಸ್ ಉಗ್ರರಿಗೆ ಸಂಬಂಧಿಸಿದ ಧ್ವಜ, ಗನ್, ಟ್ಯಾಪ್ಟಾಪ್ ಸೇರಿದಂತೆ ಶಂಕಿತರಿಗೆ ಸೇರಿದ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್‌ಐಎ ತಿಳಿಸಿದೆ.
ಮಹಾರಾಷ್ಟ್ರದ ಹಲವೆಡೆ ಶೋಧ ನಡೆಸಿದ ವೇಳೆ 51 ಹಮಾಸ್ ಧ್ವಜ ಪತ್ತೆಯಾಗಿದೆ ಎಂದು ಎನ್ಐಎ ಅಧಿಕಾರಿಗಳು ತಿಳಿಸಿದ್ದಾರೆ. ದಾಳಿ ಸಂದರ್ಭದಲ್ಲಿ ಒಟ್ಟು 68.03 ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿದೆ. ಜತೆಗೆ ಒಂದು ಪಿಸ್ತೂಲ್, ಎರಡು ಏರ್ ಗನ್, ಎಂಟು ಚಾಕುಗಳು, ಎರಡು ಲ್ಯಾಪ್‌ಟಾಪ್, ಆರು ಹಾರ್ಡ್ ಡಿಸ್ಕ್, ಮೂರು ಸಿಡಿಗಳು, 38 ಮೊಬೈಲ್, ಹತ್ತು ಮ್ಯಾಗಜೀನ್ ಬುಕ್ಸ್ ಹಾಗೂ 51 ಹಮಾಸ್ ಧ್ವಜಗಳನ್ನು ಜಪ್ತಿ ಮಾಡಲಾಗಿದೆ.
ಬೆಂಗಳೂರಿನ ಪುಲಿಕೇಶಿ ನಗರ, ಮಹಾರಾಷ್ಟ್ರದ ಪಡ್ಗಾ, ಬೊರಿವಿಲಿ, ಥಾಣೆ, ಮೀರಾ ರಸ್ತೆ ಹಾಗೂ ಪುಣೆ ಸೇರಿದಂತೆ 44 ಸ್ಥಳಗಳಲ್ಲಿ ಏಕಕಾಲಕ್ಕೆ ಎನ್‌ಐಎ ದಾಳಿ ನಡೆಸಿ ಶೋಧ ನಡೆಸಿತ್ತು. ಈ ವೇಳೆ 15 ಶಂಕಿತರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಶಂಕಿತರ ಪೈಕಿ ಆದಿಲ್ ಖೋತ್ ಎಂಬಾತನ ಮನೆಯಲ್ಲಿ ಧ್ವಜಗಳು ಪತ್ತೆಯಾಗಿವೆ ಎಂದು ಹೇಳಲಾಗಿದೆ.
ಫಿರೋಜ್ ದಸ್ತಗೀರ್ ಖುವಾನ್, ರಾಜೀಲ್ ಅಬ್ದುಲ್, ಜಿಶಾನದ ಅಝಾಜ್, ಮುಕ್ಬುಲ್ ನಚಾಮ್ ಮನೆಗಳಲ್ಲಿ ಪಿಸ್ತೂಲ್ ಹಾಗೂ ಮಾರಕಾಸ್ತ್ರಗಳು ಸಿಕ್ಕಿವೆ. ಸೈಫ್ ಅತೀಕ್ ನಚಾಮ್, ರೇಹಾನದ ಅಶ್ಫಾಕ್ ಸೂಸೆ ಹಾಗೂ ಅತೀಫ್ ನಾಸಿರ್ ಮುಲ್ಲಾ ಅವರ ಮನೆಗಳಲ್ಲಿ ನಗದು ಹಣ ಪತ್ತೆಯಾಗಿದೆ.
ಮಹಾರಾಷ್ಟ್ರದಲ್ಲಿ ಸಿಕ್ಕ ಸುಳಿವಿನ ಆಧಾರದ ಮೇಲೆ ಬೆಂಗಳೂರಿನ ಪುಲಿಕೇಶಿ ನಗರದಲ್ಲಿ ಅಲಿ ಅಬ್ಬಾಸ್ ಎಂಬಾತರನ ಮನೆ ಮೇಲೆ ದಾಳಿ ಮಾಡಿ ಶೋಧ ನಡೆಸಿದರು. ಎನ್ಐಎ ಪರಿಶೀಲನೆ ವೇಳೆ ಅಲಿ ಅಬ್ಬಾಸ್ ಮನೆಯಲ್ಲಿ ನಗದು ಹಣ ಪತ್ತೆಯಾಗಿದೆ. ಸದ್ಯ ಮನೆಯಲ್ಲೇ ಅಲಿ ಅಬ್ಬಾಸ್ ವಿಚಾರಣೆ ನಡೆಸಿ ಎನ್ಐಎ ಅಧಿಕಾರಿಗಳು ತೆರಳಿದ್ದಾರೆ.
Press Release- Update 2
NIA Swoops Down on 44 Locations in M’ Rashtra & K’Nataka, Arrests 15 Operatives of ISIS Maharashtra Modules pic.twitter.com/YvIheDUrJx— NIA India (@NIA_India) December 10, 2023