ಬೆಳ್ಳಂಬೆಳಗ್ಗೆ ಘೋರ ದುರಂತ: ಗರ್ಡರ್‌ ಲಾಂಚರ್‌ ಕುಸಿದು 15ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಂಗಳವಾರ ಬೆಳಗ್ಗೆ ಗರ್ಡರ್ ಲಾಂಚರ್ ಯಂತ್ರ ಕುಸಿದು 15 ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಸಮೃದ್ಧಿ ಎಕ್ಸ್‌ಪ್ರೆಸ್ ಹೈವೇ 3 ನೇ ಹಂತದ ನಿರ್ಮಾಣದಲ್ಲಿ ಬಳಸಲಾಗಿದ್ದ ಗರ್ಡರ್ ಲಾಂಚರ್ ಯಂತ್ರ ಕುಸಿದಿದೆ. ಈ ಘಟನೆಯಲ್ಲಿ 15 ಮಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಮೃತರ ಜೊತೆಗೆ ಇನ್ನೂ ಕೆಲವರು ಅವಶೇಷಗಳ ಅಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ.

ಥಾಣೆಯ ಸರ್ಲಾಂಬೆ ಗ್ರಾಮದ ಬಳಿ ಸೇತುವೆಯ ನಿರ್ಮಾಣ ಕಾರ್ಯ ನಡೆಯುತ್ತಿರುವಾಗ ಅಪಘಾತ ಸಂಭವಿಸಿದೆ. ಗರ್ಡರ್ ಯಂತ್ರಕ್ಕೆ ಸಂಪರ್ಕ ಕಲ್ಪಿಸುವ ಕ್ರೇನ್, ಸ್ಲ್ಯಾಬ್ 100 ಅಡಿ ಎತ್ತರದಿಂದ ಬಿದ್ದು ಭಾರಿ ಅವಘಡ ಸಂಭವಿಸಿದೆ. ಗಾಯಾಳುಗಳೊಂದಿಗೆ ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಪೊಲೀಸ್ ಸಿಬ್ಬಂದಿ, ಎನ್‌ಡಿಆರ್‌ಎಫ್ ಸಿಬ್ಬಂದಿ ಮತ್ತು ಅಗ್ನಿಶಾಮಕ ಸಿಬ್ಬಂದಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ರಕ್ಷಣಾ ಕಾರ್ಯಕರ್ತರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!