ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೆಂಟ್ರಲ್ ಕೆನಡಾದ ಮ್ಯಾನಿಟೋಬಾ ಪ್ರಾಂತ್ಯದಲ್ಲಿ ಗುರುವಾರ ರಾತ್ರಿ ಸೆಮಿ ಟ್ರೈಲರ್ ಟ್ರಕ್ ಮತ್ತು ಹಿರಿಯರನ್ನು ಹೊತ್ತೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 15 ಜನರು ಸಾವನ್ನಪ್ಪಿದ್ದು, 10 ಜನರು ಗಾಯಗೊಂಡಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಹೈವೇ ಒಂದರ ಛೇದಕದಲ್ಲಿ 25 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಸೆಮಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಮ್ಯಾನಿಟೋಬಾ ಅಧಿಕಾರಿ ರಾಬ್ ಹಿಲ್ ಹೇಳಿದ್ದಾರೆ.
ಅಪಘಾತದಲ್ಲಿ 15 ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಇನ್ನೂ 10 ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಪಘಾತವು ಕಾರ್ಬೆರಿಯ ಉತ್ತರದ ಟ್ರಾನ್ಸ್-ಕೆನಡಾ ಹೆದ್ದಾರಿಯಲ್ಲಿ ಸಂಭವಿಸಿದೆ. ರಸ್ತೆ ಅಪಘಾತದ ನಂತರ ತುರ್ತು ವಾಹನಗಳು ಮತ್ತು ಎರಡು ಹೆಲಿಕಾಪ್ಟರ್‌ಗಳು ರಕ್ಷಣಾ ಕಾರ್ಯಾಚರಣೆಗೆ ಆಗಮಿಸಿದವು. ಈ ಅವಘಡದಲ್ಲಿ ಬೆಂಕಿ ಹೊತ್ತಿಕೊಂಡಿದೆ.
ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ತಮ್ಮ ಅಧಿಕೃತ ಟ್ವಿಟರ್ ಫೀಡ್‌ನಲ್ಲಿ ರಸ್ತೆ ಅಪಘಾತ ದುರಂತ ಎಂದು ಹೇಳಿದ್ದಾರೆ. ಪ್ರಾಣ ಕಳೆದುಕೊಂಡ ಎಲ್ಲರಿಗೂ ಸಂತಾಪ ಸೂಚಿಸಿದ್ದಾರೆ. ರಸ್ತೆ ಅಪಘಾತದ ನಂತರ ಹೆದ್ದಾರಿಯನ್ನು ಮುಚ್ಚಲಾಯಿತು.