ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ನಿನ್ನೆ ಒಂದೇ ದಿನ 2,71,202 ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ಇಲಾಖೆ, ದೇಶದಲ್ಲಿ ಪ್ರತಿದಿನ ಶೇ.16.28ರಷ್ಟು ಹೊಸ ಪ್ರಕರಣಗಳು ಪತ್ತೆಯಾಗುತ್ತಿದೆ.
ನಿನ್ನೆ ದೇಶದಲ್ಲಿ 314 ಮಂದಿ ಬಲಿಯಾಗಿದ್ದಾರೆ. ನಿನ್ನೆ 1,38,331 ಮಂದಿ ಗುಣಮುಖರಾಗಿದ್ದಾರೆ.
ಈವರೆಗೆ 15,50,377 ಮಂದಿ ಸಕ್ರಿಯ ಸೋಂಕಿತರು ಪತ್ತೆಯಾಗಿದ್ದಾರೆ. ಇನ್ನುಳಿದಂತೆ ಒಮಿಕ್ರಾನ್ ಸೋಂಕಿತರ ಸಂಖ್ಯೆ 7,743ಕ್ಕೆ ಏರಿಕೆಯಾಗಿದೆ.