ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರು ಹಾಗೂ ಮೈಸೂರು ಭಾಗದಲ್ಲಿ ಚಿರತೆ ಕಾಣಿಸಿದೆ. ಇದು ಜನರಲ್ಲಿ ಭೀತಿ ಹುಟ್ಟಿಸಿದೆ. ಇವುಗಳನ್ನು ಸೆರೆ ಹಿಡಿಯಲು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಚಿರತೆಗಳನ್ನು ಶೀಘ್ರವೇ ಹಿಡಿದು ಕಾಡಿಗೆ ಬಿಡುತ್ತೇವೆ ಎಂದಿದ್ದಾರೆ.
ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ನೀಡಲಾಗುತ್ತದೆ. ಕಾಡಿನಲ್ಲಿದ್ದ ಚಿರತೆಗಳು ಈಗ ನಾಡನ್ನು ಪ್ರವೇಶಿಸಿವೆ. ಚಿರತೆಯನ್ನು ಜೀವಂತವಾಗಿ ಹಿಡಿದು ಕಾಡಿಗೆ ಬಿಡಲಾಗುತ್ತದೆ. ಇದಕ್ಕಾಗಿ ವಿಶೇಷ ತಂಡ ಮಾಡಲಾಗಿದೆ ಎಂದಿದ್ದಾರೆ.