Thursday, March 23, 2023

Latest Posts

ರಾಜ್ಯ ಬಜೆಟ್| ವನ್ಯಪ್ರಾಣಿಗಳಿಂದ ಪ್ರಾಣ ಹಾನಿಗೆ 15 ಲಕ್ಷ ರೂ. ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯ ಬಜೆಟ್‌ ಅನ್ನು ಮಂಡಿಸುತ್ತಿದ್ದು, ವನ್ಯಪ್ರಾಣಿಗಳಿಂದ ಪ್ರಾಣ ಹಾನಿಗೆ ಒಳದಾದವರಿಗೆ 15 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಮಾನವ ಮತ್ತು ವನ್ಯಜೀವಿ ಸಂಘರ್ಷದಿಂದ ಸಂಭವಿಸುವ ಪ್ರಾಣಹಾನಿಗೆ ಈಗ ನೀಡಲಾಗುತ್ತಿರುವ 7.50 ಲಕ್ಷ ರೂ. ಪರಿಹಾರವನ್ನು 15 ಲಕ್ಷ ರೂ.ಗೆ ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ. ಜನವಸತಿ ಪ್ರದೇಶಗಳಿಂದ ಸೆರೆ ಹಿಡಿದ ವನ್ಯ ಪ್ರಾಣಿಗಳನ್ನು ಬಿಡುಗಡೆ ಮಾಡಲು ಭದ್ರಾ ಹಾಗೂ ಬಂಡಿಪುರ ರಾಷ್ಟ್ರೀಯ ಉದ್ಯಾನದಲ್ಲಿ ವ್ಯವಸ್ಥೆ ಮಾಡಲಾಗುವುದು ಎನ್ನುವುದನ್ನು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!