HEAT STROKE | ದೆಹಲಿಯಲ್ಲಿ ಸುಡುಬಿಸಿಲು, ಬಿಸಿಗಾಳಿಗೆ 15 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಉತ್ತರ ಭಾರತದಲ್ಲಿ ದಾಖಲೆ ಪ್ರಮಾಣದಲ್ಲಿ ತಾಪಮಾನವಿದ್ದು, ಕಳೆದ 72 ಗಂಟೆಗಳಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಬಿಸಿ ಗಾಳಿಗೆ 5 ಮತ್ತು ನೋಯ್ಡಾದಲ್ಲಿ ಕಳೆದ 24 ಗಂಟೆಗಳಲ್ಲಿ 10ಕ್ಕೂ ಹೆಚ್ಚುಮಂದಿ ಪ್ರಾಣಬಿಟ್ಟಿದ್ದಾರೆ.

ರಾಮ್ ಮನೋಹರ್ ಲೋಹಿಯಾ ಮತ್ತು ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ತಲಾ ಒಬ್ಬ ಸಾವು ವರದಿಯಾಗಿದೆ. ಲೋಕನಾಯಕ ಆಸ್ಪತ್ರೆಯಲ್ಲಿ ಮೂರು ಜನ ಸಾವನ್ನಪ್ಪಿದ್ದಾರೆ. ಜೂನ್ 16 ರಂದು ಶಾಖದ ಹೊಡೆತದಿಂದ ನಿಧನರಾದ ಕಾರ್ ಮೆಕ್ಯಾನಿಕ್ ಜೂನ್ 15 ರಂದು 106 ಡಿಗ್ರಿಗಳಷ್ಟು ತೀವ್ರ ಜ್ವರದಿಂದ ಬಳಲುತ್ತಿದ್ದರು ಎಂದು ವೈದ್ಯರು ಹೇಳಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!