ಕೇಂದ್ರದ ಮಾದರಿಯಲ್ಲಿ ವಸತಿ ಯೋಜನೆಗಳಲ್ಲಿ ಶೇಕಡ ೧೫ರಷ್ಟು ಮೀಸಲಾತಿ: ಸಚಿವ ಜಮೀರ್ ಅಹಮದ್ ಸಮರ್ಥನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇಕಡ ೧೫ ರಷ್ಟು ಮೀಸಲು ನಿರ್ಧಾರ ಕೇಂದ್ರದ ಮಾದರಿ ಎಂದು ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಸಾಚಾರ್ ಸಮಿತಿ ವರದಿ ಪ್ರಕಾರ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ವಸತಿ ಯೋಜನೆಗಳಲ್ಲಿ ಶೇಕಡ ೧೫ ರಷ್ಟು ಮೀಸಲಾತಿ ಅಲ್ಪಸಂಖ್ಯಾತ ಸಮುದಾಯಕ್ಕೆ ಇದೆ. ಅದೇ ರೀತಿ ರಾಜ್ಯದಲ್ಲೂ ನೀಡಬೇಕು ಎಂಬ ಬೇಡಿಕೆ ಇತ್ತು. ಈ ಹಿನ್ನೆಲೆಯಲ್ಲಿ ಕೇಂದ್ರದ ಮಾದರಿಯನ್ನೇ ಅನುಸರಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರತಿಪಕ್ಷಗಳು ಅನಗತ್ಯ ಟೀಕೆ ಮಾಡುತ್ತಿರುವುದು ಶೋಭೆ ತರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!