ತಂದೆ ಮೇಲಿನ ಕೋಪಕ್ಕೆ ಮಗಳ ಮೇಲೆ ಅತ್ಯಾಚಾರ, ಕೊಲೆ: ಮಹಾರಾಷ್ಟ್ರದಲ್ಲಿ ಭೀಭತ್ಸ ಕೃತ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತನ್ನ ಮೇಲೆ ದಾಳಿ ಮಾಡಿದ ಎಂಬ ಕಾರಣಕ್ಕೆ ಸೇಡು ತೀರಿಸಿಕೊಳ್ಳಲು ಹುಡುಗನೊಬ್ಬ ಅಪ್ಪನ ಮೇಲಿನ ಕೋಪಕ್ಕೆ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ದಾರುಣ ಘಟನೆ ಮಹಾರಾಷ್ಟ್ರದ ಕಲ್ಯಾಣ್ ಪ್ರದೇಶದಲ್ಲಿ ಗುರುವಾರ ನಡೆದಿದೆ.

ಪೊಲೀಸರ ಪ್ರಕಾರ, ಕಲ್ಯಾಣ್ ಪ್ರದೇಶದಲ್ಲಿ ಇತ್ತೀಚೆಗೆ ಒಬ್ಬ ವ್ಯಕ್ತಿ ತನ್ನ ಮನೆಯ ಬಳಿಯಿದ್ದ ಹದಿನೈದು ವರ್ಷದ ಹುಡುಗನೊಂದಿಗೆ ಜಗಳವಾಡಿ ಒಂದೆರೆಡೇಟು ಹೊಡೆದಿದ್ದ ಎನ್ನಲಾಗಿದೆ. ಅಷ್ಟಕ್ಕೆ ಕೋಪಗೊಂಡ ಬಾಲಕ ಆ ವ್ಯಕ್ತಿಯ ಮೇಲೆ ಸೇಡು ತೀರಿಸಿಕೊಳ್ಳಲು ಸೂಕ್ತ ಸಮಯಕ್ಕೆ ಹೊಂಚು ಹಾಕಿದ್ದಾನೆ. ವ್ಯಕ್ತಿಯ ಒಂಭತ್ತು ವರ್ಷದ ಮಗಳು ಒಂಟಿಯಾಗಿದ್ದಾಗ ಅಪಹರಿಸಿ ರೈಲ್ವೆ ನಿಲ್ದಾಣದ ಬಳಿ ಅತ್ಯಾಚಾರ ಎಸಗಿದ್ದಾನೆ. ನಂತರ ಕತ್ತು ಕುಯ್ದು ಸಾಯಿಸಿ ಅಲ್ಲಿಂದ ಪರಾರಿಯಾದನು. ಬೆಳಗ್ಗೆ ರೈಲ್ವೆ ನಿಲ್ದಾಣದ ಬಳಿ ಬಾಲಕಿಯ ಶವವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಹಾಗೂ ಬಾಲಕಿಯ ತಂದೆಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಸ್ಥಳಕ್ಕಾಗಮಿಸಿ ಬಾಲಕಿಯ ಶವವನ್ನು ಹೊರತೆಗೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಬಾಲಕನ ಮೇಲೆ ಅನುಮಾನ ಮೂಡಿದೆ. ಆತನ ಬಗ್ಗೆ ವಿಚಾರಿಸಿದಾಗ ಜಗಳ ನಡೆದಿರುವುದು ತಿಳಿಯಿತು. ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸಲಾಗಿದೆ. ಪೊಲೀಸರು ಬಾಲಕನ ಮೇಲೆ ಅನುಮಾನಗೊಂಡು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿ ವಿರುದ್ಧ ಪೋಕ್ಸೋ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!