15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳು ಶೀಘ್ರವೇ ಗುಜರಿಗೆ: ನಿತಿನ್ ಗಡ್ಕರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಹದಿನೈದು ವರ್ಷಗಳಷ್ಟು ಹಳೆಯದಾದ ಸರ್ಕಾರಿ ವಾಹನವನ್ನು ಗುಜುರಿಗೆ ಹಾಕುವ ಸಂಬಂಧ ರಾಜ್ಯ ಸರ್ಕಾರಗಳಿಗೆ ಸೂಚನೆ ಕಳುಹಿಸಲಾಗಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ರಸ್ತೆಗಳಲ್ಲಿ ಸಂಚರಿಸುವ 15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳನ್ನು ಗುಜುರಿಗೆ ನೀಡುವಂತೆ ರಾಜ್ಯ ಸರ್ಕಾರಗಳಿಗೆ ತಿಳಿಸಲಾಗಿದೆ ಎಂದರು.
ಬಸ್ಸುಗಳು, ಟ್ರಕ್, ಕಾರುಗಳು ಸೇರಿದಂತೆ ಎಲ್ಲಾ ರೀತಿಯ ವಾಹನಗಳನ್ನು ಒಳಗೊಂಡಂತೆ ಈ ಸೂಚನೆ ಹೊರಡಿಸಲಾಗುತ್ತಿದೆ. ಪ್ರತಿ ಹಳೆಯ ವಾಹನಗಳ ಓಡಾಟ ನಿಲ್ಲಿಸಲಾಗುತ್ತದೆ. ಮಾಲಿನ್ಯವನ್ನು ತಡೆಯುವ ಪ್ರಯತ್ನದಲ್ಲಿ ಸರ್ಕಾರವು ಈ ವರ್ಷದ ಆರಂಭದಲ್ಲಿ ಹೊಸ ವಾಹನ ನೀತಿಯನ್ನು ಘೋಷಿಸಿದೆ.
ಹೊಸ ವಾಹನಗಳಿಗೆ ಹೋಲಿಸಿದರೆ ಈ ವಾಹನಗಳು ಶೇ.10-12ರಷ್ಟು ಹೆಚ್ಚು ವಾಯುಮಾಲಿನ್ಯವನ್ನುಂಟು ಮಾಡುತ್ತಿವೆ. ಇದೇ ಕಾರಣಕ್ಕೆ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗಡ್ಕರಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!