August 24, 2026
Monday, August 24, 2026
spot_img

15 ವರ್ಷಗಳ ವೈವಾಹಿಕ ವಿವಾದಕ್ಕೆ ತೆರೆ: ಒಮರ್ ಅಬ್ದುಲ್ಲಾ-ಪಾಯಲ್ ಗೆ ಸುಪ್ರೀಂ ಕೋರ್ಟ್‌ನಿಂದ ವಿಚ್ಛೇದನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೀರ್ಘಕಾಲದಿಂದ ನ್ಯಾಯಾಲಯದ ಮೆಟ್ಟಿಲೇರಿದ್ದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ವೈವಾಹಿಕ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ.

ಪರಸ್ಪರ ಒಪ್ಪಿಗೆಯೊಂದಿಗೆ ಮದುವೆ ಬಂಧನದಿಂದ ಹೊರಬರಲು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಒಮರ್ ಅಬ್ದುಲ್ಲಾ ಹಾಗೂ ಪಾಯಲ್ ಅಬ್ದುಲ್ಲಾ ಅವರಿಗೆ ವಿಚ್ಛೇದನ ಮಂಜೂರು ಮಾಡಿದೆ.

ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನ

ಒಮರ್ ಅಬ್ದುಲ್ಲಾ ಮತ್ತು ಪಾಯಲ್ ಅಬ್ದುಲ್ಲಾ ಇಬ್ಬರೂ ಪರಸ್ಪರ ಸಮ್ಮತಿಯೊಂದಿಗೆ ವಿವಾಹ ಸಂಬಂಧವನ್ನು ಕೊನೆಗೊಳಿಸಲು ನಿರ್ಧರಿಸಿದ್ದರು. ಈ ಹಿನ್ನೆಲೆಯಲ್ಲಿ ಸಂವಿಧಾನದ 142ನೇ ವಿಧಿಯಡಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದ್ದು, ಬಾಕಿ ಉಳಿದಿದ್ದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುವುದಾಗಿ ಇಬ್ಬರೂ ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದನ್ನೂ ಓದಿ:

ಸುಪ್ರೀಂ ಕೋರ್ಟ್ ನೀಡಿದ ತೀರ್ಪು

ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರಿದ್ದ ಪೀಠದ ಮುಂದೆ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು. ಇಬ್ಬರೂ ಸಮ್ಮತಿಯಿಂದ ಬೇರ್ಪಡಲು ನಿರ್ಧರಿಸಿರುವುದನ್ನು ಪರಿಗಣಿಸಿದ ನ್ಯಾಯಾಲಯ, ಅರ್ಜಿಯನ್ನು ಅಂಗೀಕರಿಸಿ ವಿಚ್ಛೇದನಕ್ಕೆ ಅನುಮೋದನೆ ನೀಡಿತು.

15 ವರ್ಷದ ಕಾನೂನು ಹೋರಾಟಕ್ಕೆ ಅಂತ್ಯ

ಒಮರ್ ಅಬ್ದುಲ್ಲಾ ಸುಮಾರು 15 ವರ್ಷಗಳಿಂದ ಪತ್ನಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. 2016ರಲ್ಲಿ ಕೌಟುಂಬಿಕ ನ್ಯಾಯಾಲಯ ವಿಚ್ಛೇದನ ಅರ್ಜಿಯನ್ನು ತಿರಸ್ಕರಿಸಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !