Thursday, March 23, 2023

Latest Posts

ಪ್ರತಿ ವರ್ಷ ರೈತರ ಖಾತೆಗೆ 15 ಸಾವಿರ ಹಣ: ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದ ರೆಡ್ಡಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಸಲುವಾಗಿ ಜನಾರ್ಧನ ರೆಡ್ಡಿಯ ಪಕ್ಷ ಕಲ್ಯಾಣ ರಾಜ್ಯ ಪ್ರಗತಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ.

ರಾಜ್ಯದ ಪ್ರತಿ ರೈತರ ಖಾತೆಗೆ ವರ್ಷಕ್ಕೆ 15 ಸಾವಿರ ಹಣ ಜಮ, ಮನೆ ಬಾಗಿಲಿಗೆ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆ ಬಗೆ ಹರಿಸೋ ನಿಟ್ಟಿನಲ್ಲಿ ಹೊಸ ಹೆಜ್ಜೆ ಸೇರಿದಂತೆ ವಿವಿಧ ಘೋಷಣೆಗಳನ್ನು ಘೋಷಿಸಲಾಗಿದೆ.

ರಾಯಚೂರಿನ ಅಂಬಾಮಠದಲ್ಲಿ ಜನಾರ್ಧನ ರೆಡ್ಡಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು.
ಪ್ರತಿ ವರ್ಷ ರೈತರ ಖಾತೆಗೆ 15 ಸಾವಿರ ಹಣ ಜಮೆ ಮಾಡಲಾಗುತ್ತದೆ. ಮನೆ ಬಾಗಿಲಿಗೆ ಅಧಿಕಾರಿಗಳು ಹೋಗಿ ಜನರ ಸಮಸ್ಯೆ ಆಲಿಸಿ, ಪರಿಹರಿಸಲು ಕ್ರಮ ಕೈಗೊಳ್ಳೋದಾಗಿ ಪ್ರಣಾಳಿಕೆಯ ಭರವಸೆಯಲ್ಲಿ ಹೇಳಿದ್ದಾರೆ.

ಅಂದಹಾಗೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಮಾಜಿ ಸಚಿವ ಜನಾರ್ಧನ ರೆಡ್ಡಿ, ಡಿಸೆಂಬರ್ 22ರಂದು ಗಂಗಾವತಿಯಲ್ಲಿ ತಮ್ಮ ಹೊಸ ಪಕ್ಷವನ್ನು ಘೋಷಿಸಿದ್ದರು. ಅಲ್ಲದೇ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಿಂದಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸೋದಾಗಿ ತಿಳಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!