ರಾಜ್ಯದಲ್ಲಿ ಇಂದು 1,579 ಮಂದಿಗೆ ಕೋವಿಡ್, 23 ಸೋಂಕಿತರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು 1,579 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 23 ಜನ ಕೊರೋನಾಗೆ ಬಲಿಯಾಗಿದ್ದಾರೆ.
ಈ ಕುರಿತು ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ 769 ಮಂದಿಗೆ ಸೇರಿ ರಾಜ್ಯದಲ್ಲಿ ಒಟ್ಟು 1,579 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇನ್ನು ರಾಜ್ಯದಲ್ಲಿ ಇಂದು ಪಾಸಿಟಿವಿಟಿ ದರ 1.74 %ಕ್ಕೆ ತಲುಪಿದೆ ಎಂದಿದ್ದಾರೆ.
ಇಂದು 5,079 ಜನ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ 19,761 ಕ್ಕೆ ತಲುಪಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!