Wednesday, February 21, 2024

ರಾಜ್ಯದಲ್ಲಿ ಇಂದು 158 ಜನರಿಗೆ ಕೊರೊನಾ ಸೋಂಕು ದೃಢ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು 158 ಜನರಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನಕ್ಕೆ 85 ಜನರಿಗೆ ಕೊರೋನಾ ಸೋಂಕು ದೃಢವಾಗಿದೆ. ಅಲ್ಲಿಗೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ. 1.98ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 8350 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, 568 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. 69 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಯಾವೆಲ್ಲ ಜಿಲ್ಲೆಗಳಲ್ಲಿ ಕೊರೊನಾ ಕೇಸ್ ಪತ್ತೆ
ಮೈಸೂರು 12, ದಕ್ಷಿಣ ಕನ್ನಡ 8, ಚಾಮರಾಜನಗರ 7, ವಿಜಯನಗರ 6, ಮಂಡ್ಯ 5, ರಾಮನಗರ 5, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಂದು 5, ಬಳ್ಳಾರಿ 4, ಶಿವಮೊಗ್ಗ 4, ಚಿಕ್ಕಮಗಳೂರು 3, ಕೋಲಾರ 3, ಚಿಕ್ಕಬಳ್ಳಾಪುರ, ಧಾರವಾಡ, ಗದಗ, ಹಾಸನ, ಕಲಬುರಗಿ, ಬೀದರ್, ಕೊಪ್ಪಳ ಜಿಲ್ಲೆಯಲ್ಲಿ ತಲಾ 1 ಕೊರೊನಾ ಕೇಸ್ ಪತ್ತೆ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!