April 15, 2026
Wednesday, April 15, 2026
spot_img

16 ವರ್ಷದೊಳಗಿನ ಮಕ್ಕಳಿಗೆ ಫೋನ್‌ ನಿಷೇಧ? ನಿಜವೇ ಆದ್ರೆ ಬೆಸ್ಟ್‌ ಅಂತಿದ್ದಾರೆ ಪೋಷಕರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸ್ಕೂಲು ಕಾಲೇಜಿಗೆ ಹೋಗುವ ಮಕ್ಕಳ ಒಬೈಲ್‌ ಬಳಕೆ ಪೋಷಕರಿಗೆ ಸುಸ್ತು ಮಾಡಿದೆ. ಅತಿಯಾದ ಮೊಬೈಲ್‌ ಬಳಕೆಯಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕ್ಷೀಣಿಸುತ್ತಿದೆ. ಎಷ್ಟೋ ಮಕ್ಕಳು ಮೊಬೈಲ್‌ ಕೊಡದ್ದಕ್ಕೆ ಆತ್ಮಹತ್ಯೆಗೂ ಶರಣಾಗಿದ್ದಾರೆ. ಈ ಎಲ್ಲ ಕಾರಣಗಳಿಂದ ಪೋಷಕರು ಕೂಡ ಮಕ್ಕಳ ಮೊಬೈಲ್‌ ಬಳಕೆ ಬ್ಯಾನ್‌ ಆಗಿದ್ರೆ ಚೆನ್ನಾಗಿರುತ್ತಿತ್ತು ಎಂದುಕೊಳ್ಳುತ್ತಿದ್ದರು. ಅಂತಹ ಪೋಷಕರಿಗೆ ಇಂದು ಗುಡ್‌ನ್ಯೂಸ್‌ ಸಿಕ್ಕಿದೆ.

ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧಿಸಲು ಚಿಂತನೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಸುಳಿವು ಕೊಟ್ಟಿದ್ದಾರೆ. 16 ವರ್ಷದೊಳಗಿನ ಮಕ್ಕಳಿಗೆ ಶಾಲೆ ಹಾಗೂ ಕಾಲೇಜು ಕ್ಯಾಂಪಸ್‌ನಲ್ಲಿ ಮೊಬೈಲ್ ಫೋನ್ ನಿಷೇಧ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ.

ಮೊನ್ನೆ ಬೆಂಗಳೂರಿನಲ್ಲಿ ನಡೆದ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಸ್ತಾಪ ಆಗಿದೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಇಂದಿನ ದಿನಗಳಲ್ಲಿ ಯುವಕರು ಡ್ರಗ್ಸ್ಗೆ ಬಲಿಯಾಗುತ್ತಿದ್ದಾರೆ. ಸೋಶಿಯಲ್ ಮೀಡಿಯಾದ ಅತಿಯಾದ ಬಳಕೆ ಕೂಡ ಅವರಿಗೆ ಹಾನಿ ಮಾಡುತ್ತಿದೆ. ಹೀಗಾಗಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ಯೋಚನೆ ಇದೆ ಅಂತಾ ಸ್ಪಷ್ಟಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !