ಬಾಂಗ್ಲಾದ ಕಂಟೈನರ್ ಡಿಪೋದಲ್ಲಿ ಭೀಕರ ಸ್ಫೋಟ; 16 ಜನರ ಸಾವು, 450 ಮಂದಿ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬಾಂಗ್ಲಾದೇಶದ ಚಿತ್ತಗಾಂಗ್‌ನ ಸೀತಾಕುಂಡ ಉಪಜಿಲಾದಲ್ಲಿರುವ ಖಾಸಗಿ ಕಂಟೈನರ್ ಡಿಪೋದಲ್ಲಿ ಶನಿವಾರ ರಾತ್ರಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಮತ್ತು 450 ಜನರು ಗಾಯಗೊಂಡಿದ್ದಾರೆ.
ಉಪಜಿಲಾಜಿಲಾದ ಕಡಮ್ರಸುಲ್ ಪ್ರದೇಶದ ಬಿಎಂ ಕಂಟೈನರ್ ಡಿಪೋದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಮುನ್ನವೇ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ನಂತರ ಬೆಂಕಿ ಮತ್ತಷ್ಟು ವ್ಯಾಪಿಸಿತು ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ.
ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ 11:45 ಕ್ಕೆ ಭಾರೀ ಸ್ಫೋಟ ಸಂಭವಿಸಿದೆ. ಇದರ ಬೆನ್ನಲ್ಲೇ ಕಂಟೈನರ್ ಒಂದರಲ್ಲಿ ರಾಸಾಯನಿಕ ಅಂಶವಿದ್ದ ಕಾರಣ ಬೆಂಕಿ ಒಂದು ಕಂಟೇನರ್ ನಿಂದ ಮತ್ತೊಂದು ಕಂಟೇನರ್ ಗೆ ವ್ಯಾಪಿಸಿದೆ.”ಈ ಘಟನೆಯಲ್ಲಿ 450 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ, ಕನಿಷ್ಠ 350 ಐಸಿಯು ನಲ್ಲಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು” ಎಂದು ಅಧಿಕಾರಿಗಳು ಹೇಳಿದ್ದಾರೆ.
ಮೂಲಗಳ ಪ್ರಕಾರ, ಸ್ಫೋಟದಲ್ಲಿ ಹತ್ತಿರದ ಮನೆಗಳ ಕಿಟಕಿಗಳ ಗಾಜುಗಳು ಒಡೆದುಹೋಗಿವೆ ಸುಮಾರು 19 ಅಗ್ನಿಶಾಮಕ ಘಟಕಗಳು ಬೆಂಕಿಯನ್ನು ನಂದಿಸಲು ಕೆಲಸ ಮಾಡುತ್ತಿವೆ ಮತ್ತು ಆರು ಆಂಬ್ಯುಲೆನ್ಸ್‌ಗಳು ಸಹ ಸ್ಥಳದಲ್ಲಿ ಲಭ್ಯವಿದೆ ಎಂದು ಚಿತ್ತಗಾಂಗ್ ಅಗ್ನಿಶಾಮಕ ಸೇವೆ ಮತ್ತು ಸಿವಿಲ್ ಡಿಫೆನ್ಸ್ ಸಹಾಯಕ ನಿರ್ದೇಶಕ ಎಂಡಿ ಫಾರುಕ್ ಹೊಸೈನ್ ಸಿಕ್ದರ್ ಹೇಳಿದ್ದಾರೆ. ಗಾಯಾಳುಗಳಲ್ಲಿ ಹೆಚ್ಚಿನವರು ಭಾರೀ ಸುಟ್ಟಗಾಯಗಳಿಂದ ಬಳಲುತ್ತಿದ್ದರು ಮತ್ತು ಇತರ ಹಲವರ ಆರೋಗ್ಯ ಸ್ಥಿತಿ ಕೂಡ ಗಂಭೀರವಾಗಿದೆ. ವಿನಾಶಕಾರಿ ಬೆಂಕಿಯನ್ನು ನಂದಿಸಲು ಅಧಿಕಾರಿಗಳು ರಾತ್ರಿಯಿಂದ ಶ್ರಮಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!