ದೋಣಿಯಲ್ಲಿ ಹೊತ್ತಿಕೊಂಡ ಬೆಂಕಿ: ಬೆಂಕಿಯ ಕೆನ್ನಾಲಿಗೆಗೆ 16 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೋಣಿಯಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ 16 ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಕಾಂಗೋದ ನದಿಯಲ್ಲಿ ಸೋಮವಾರ ನಡೆದಿದೆ.

ರಾಜಧಾನಿ ಕಿನ್ಯಾಸಾದ ಪೂರ್ವ ಭಾಗದಿಂದ ಬಂಡಾಕ ನಗರದತ್ತ ಇಂಧನ ಹೊತ್ತು ಸಾಗುತ್ತಿದ್ದ ದೋಣಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿಯ ಕೆನ್ನಾಲಿಗೆಗೆ ದೋಣಿಯಲ್ಲಿದ್ದ 16 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಅವಘಡದಲ್ಲಿ 11 ಮಂದಿಯನ್ನು ರಕ್ಷಿಸಲಾಗಿದೆ. ಉಳಿದವರು ನಾಪತ್ತೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಸ್ಪಷ್ಟ ಮಾಹಿತಿ ಸಿಕ್ಕಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.

ಎರಡು ದಿನಗಳ ಹಿಂದೆ ಕಾಂಗೋ ನದಿಯಲ್ಲಿ ದೋಣಿ ಮುಳುಗಿ 40 ಮಂದಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಈ ಅವಘಡ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!