ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಲಿಸುತ್ತಿದ್ದ ಬಸ್‌ನಲ್ಲಿ ದಿಢೀರ್ ಬೆಂಕಿ ಹೊತ್ತಿಕೊಂಡ ಪರಿಣಾಮ 16 ಮಂದಿ ಸಾವನ್ನಪ್ಪಿದ್ದು, 11 ಜನ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಪಂಜಾಬ್‌ನ ಪಿಂಡಿ ಭಟ್ಟಿಯಾನ್ ಪ್ರದೇಶದ ಸಮೀಪ ಇಂದು (ಭಾನುವಾರ) ಮುಂಜಾನೆ ಸಂಭವಿಸಿದೆ.
35 ರಿಂದ 40 ಪ್ರಯಾಣಿಕರಿದ್ದ ಬಸ್ ಕರಾಚಿಯಿಂದ ಇಸ್ಲಾಮಾಬಾದ್‌ಗೆ ತೆರಳುತ್ತಿತ್ತು. ಈ ವೇಳೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 16 ಜನರು ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.
ಡೀಸೆಲ್ ಡ್ರಮ್‌ಗಳನ್ನು ಸಾಗಿಸುತ್ತಿದ್ದ ಪಿಕಪ್ ವ್ಯಾನ್‌ಗೆ ಬಸ್ ಡಿಕ್ಕಿ ಹೊಡೆದ ಬಳಿಕ ಬೆಂಕಿ ಹೊತ್ತಿಕೊಂಡಿದೆ. ಇದರಿಂದಾಗಿ ಈ ದುರಂತ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ಫಹಾದ್ ನೀಡಿದ ಮಾಹಿತಿ ನೀಡಿದ್ದಾರೆ.
ಈ ದುರಂತದಲ್ಲಿ ಗಾಯಗೊಂಡವರಲ್ಲಿ ಅನೇಕರ ಸ್ಥಿತಿ ಗಂಭೀರವಾಗಿದೆ. ಎರಡೂ ವಾಹನಗಳ ಚಾಲಕರು ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸಿದ ವೇಳೆ ಅಲ್ಲೇ ಹತ್ತಿರದಲ್ಲಿದ್ದ ಜನರು ಬಸ್ಸಿನ ಕಿಟಕಿಗಳನ್ನು ಒಡೆದು ಪ್ರಯಾಣಿಕರನ್ನು ಹೊರಗೆ ಎಳೆಯಲು ಪ್ರಯತ್ನಿಸಿದ್ದಾರೆ ಎಂದು ಸುದ್ದಿವಾಹಿನಿ ವರದಿ ಮಾಡಿದೆ.