2022ರ ಮೊದಲ ವಾರದಲ್ಲೇ 16 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು ಕಾಶ್ಮೀರದ ಬದ್ಗಾಂ ನಲ್ಲಿ ಗುರುವಾರ ನಡೆದ ಎನ್‌ ಕೌಂಟರ್‌ ಬಳಿಕ ಹೊಸ ವರ್ಷದ ಮೊದಲ ವಾರದಲ್ಲಿ ಒಟ್ಟು 16 ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ ಎಂದು ವರದಿ ತಿಳಿಸಿದೆ.
ಗುರುವಾರ ನಡೆದ ಎನ್‌ ಕೌಂಟರ್‌ ನಲ್ಲಿ ಮೂವರು ಜೈಶ್‌ ಎ ಮೊಹಮ್ಮದ್‌ ಸಂಘಟನೆಯ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಈ ವೇಳೆ ಉಗ್ರರ ಬಳಿ ಇದ್ದ ಎಕೆ 56 ರೈಫಲ್ ಗಳು, 8 ಮ್ಯಾಗಜಿನ್‌ ಸೇರಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್‌ ಕುಮಾರ್‌ ತಿಳಿಸಿದ್ದಾರೆ.
ಈ ಮೂಲಕ 2022ನೇ ವರ್ಷದ ಮೊದಲ ವಾರದಲ್ಲಿ ಭದ್ರತಾ ಪಡೆಗಳು 16 ಉಗ್ರರನ್ನು ಹತ್ಯೆ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!