ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಬುಲೆನ್ಸ್‌ನಲ್ಲಿ 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ದಾರುಣ ಘಟನೆ ಮಧ್ಯಪ್ರದೇಶದ ಮೌಗಂಜ್‌ನಲ್ಲಿ ನಡೆದಿದ್ದು, ತಡವಾಗಿ (ನ.22ರಂದು) ಬೆಳಕಿಗೆ ಬಂದಿದೆ.
ಒಟ್ಟು ನಾಲ್ವರು ಆರೋಪಿಗಳಿದ್ದು, ಆ ಪೈಕಿ ಇಬ್ಬರು ಆರೋಗಳಾದ ಮೌಗಂಜ್ ಜಿಲ್ಲೆಯ ನೈಗರ್ಹಿ ತಹಸಿಲ್‌ನ ನಿವಾಸಿಗಳಾದ ಆಂಬ್ಯುಲೆನ್ಸ್ ಚಾಲಕ ವಿರೇಂದ್ರ ಚತುರ್ವೇದಿ ಹಾಗೂ ಆತನ ಸ್ನೇಹಿತ ರಾಜೇಶ ಕೇವತ್‌ನನ್ನು ಬಂಧಿಸಿದ್ದಾರೆ.
ಮೌಗಂಜ್‌ನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಮಧ್ಯಪ್ರದೇಶ ಸರ್ಕಾರವು ಪಿಪಿಪಿ ಮಾದರಿಯಲ್ಲಿ ಗ್ರಾಮೀಣ ಭಾಗದ ಮಹಿಳೆಯರು, ಮಕ್ಕಳು ಹಾಗೂ ಬಿಪಿಎಲ್ ಕುಟುಂಬಗಳ ಆರೋಗ್ಯ ರಕ್ಷಣೆಗಾಗಿ ಜನನಿ ಎಕ್ಸ್ಪ್ರೆಸ್ ಆಂಬುಲೆನ್ಸ್ ಸೌಲಭ್ಯ ಒದಗಿಸಿತ್ತು. ಈ 108 ಆಂಬುಲೆನ್ಸ್‌ನಲ್ಲೇ ಕೃತ್ಯ ನಡೆದಿದೆ.
ಅಪ್ರಾಪ್ತೆಯು ತನ್ನ ಸಹೋದರಿ ಹಾಗೂ ಮಾವನೊಂದಿಗೆ ಆಂಬುಲೆನ್ಸ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಚಾಲಕ ಹಾಗೂ ಆತನ ಮೂವರು ಸಹಚರರು ಸಹ ಆಂಬುಲೆನ್ಸ್‌ನಲ್ಲಿದ್ದರು. ಮಾರ್ಗಮಧ್ಯೆ ನೀರು ತರಲೆಂದು ಬಾಲಕಿಯ ಸಹೋದರಿ ಹಾಗೂ ಆಕೆಯ ಮಾವ ಕೆಳಗಿಳಿದಿದ್ದಾರೆ. ಅವರಿಗಾಗಿ ಕಾಯದೇ ಆಂಬುಲೆನ್ಸ್‌ನ್ನೂ ಚಲಾಯಿಸಿಕೊಂಡು ಬಂದಿದ್ದು, ಚಾಲಕನ ಸ್ನೇಹಿತ ರಾಕೇಶ್ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಆ ದಿನ ರಾತ್ರಿ ಆಕೆಯನ್ನು ವಾಹನದಲ್ಲಿಯೇ ಇರಿಸಿಕೊಂಡು ಮಾರನೇ ದಿನ ರಸ್ತೆಯ ಬದಿಯಲ್ಲಿ ಬಿಸಾಡಿ ಹೋಗಿದ್ದಾರೆ. ಬಳಿಕ ಅಪ್ರಾಪ್ತೆ ಮನೆ ತಲುಪಿದ್ದು, ನಡೆದ ವಿಷಯವನ್ನು ತಾಯಿಗೆ ತಿಳಿಸಿದ್ದಾಳೆ. ಇದ್ದರಿಂದ ಗಾಬರಿಯಾದ ತಾಯಿ ಮನೆಯ ಮರ್ಯಾದೆ ಪ್ರಶ್ನೆ ಎಂದು ದೂರು ದಾಖಲಿಸಿರಲಿಲ್ಲ.
ಬಳಿಕ ನ.25 ರಂದು ಸಂತ್ರಸ್ತೆ ಹಾಗೂ ತಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದು, ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ. ನ.27 ರಂದು ನಾಲ್ವರ ಪೈಕಿ ಇಬ್ಬರನ್ನು ಬಂಧಿಸಲಾಗಿದೆ. ಇನ್ನೂ ಈ ಕೃತ್ಯದಲ್ಲಿ ಸಂತ್ರಸ್ತೆಯ ಸಹೋದರಿ ಹಾಗೂ ಮಾವ ಭಾಗಿಯಾಗಿರುವುದಾಗಿ ತಿಳಿಸಿದ್ದು, ಅವರನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದು ತಿಳಿಸಿದ್ದಾರೆ.