ಹೊಸದಿಗಂತ ಆನ್ ಲೈನ್ ಡೆಸ್ಕ್:
ದೇಶದೆಲ್ಲೆಡೆ ಪಿಎಂ ಕೇರ್ಸ್ ಫಂಡ್ ಟ್ರಸ್ಟ್ ವತಿಯಿಂದ 162 ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು 201.58 ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ.
ಸಾರ್ವಜನಿಕ ಆರೋಗ್ಯ ಸೌಲಭ್ಯ ಹೆಚ್ಚಿಸುವ ನಿಟ್ಟಿನಲ್ಲಿ ಘಟಕಗಳನ್ನು ಸ್ಥಾಪಿಸಲಾಗುತ್ತಿದ್ದು, ಯೋಜನೆಯ ಕಾರ್ಯಾರಂಭಕ್ಕೆ 137.33 ಕೋಟಿ ರೂ. ಮತ್ತು ಸಮಗ್ರ ವಾರ್ಷಿಕ ನಿರ್ವಹಣೆಗೆ, ಉಪಕರಣಗಳಿಗೆ 64.25 ಕೋಟಿ ರೂಪಾಯಿ ಕಾಯ್ದಿರಿಸಲಾಗಿದೆ.
ಇನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿರುವ ಕೇಂದ್ರ ವೈದ್ಯಕೀಯ ಸರಬರಾಜು ಸ್ಟೋರ್ ಇದನ್ನು ನಿರ್ವಹಿಸಲಿದೆ.
ಕರ್ನಾಟಕದಲ್ಲಿ 6, ಮಹಾರಾಷ್ಟ್ರ 10, ಉತ್ತರ ಪ್ರದೇಶ 10 ಸೇರಿದಮತೆ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 162 ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕ ಆರಂಭಿಸಲಾಗುವುದು ಎಂದು ಪ್ರಧಾನಮಂತ್ರಿ ಕಾರ್ಯಾಲಯದಿಂದ ಮಾಹಿತಿ ನೀಡಲಾಗಿದೆ.