spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

’16ನೇ ಕನ್ನಡ ವಿಜ್ಞಾನ ಸಮ್ಮೇಳನ’ಕ್ಕೆ ಶ್ರೀ ಜಿತಕಾಮಾನಂದ ಸ್ವಾಮೀಜಿ ಚಾಲನೆ

- Advertisement -Nitte

ಹೊಸ ದಿಗಂತ ವರದಿ, ಮಂಗಳೂರು:

ಸ್ವದೇಶಿ ವಿಜ್ಞಾನ ಆಂದೋಲನ ಕರ್ನಾಟಕ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಸಹಯೋಗದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆಯುತ್ತಿರುವ ಮೂರು ದಿನಗಳ ’16ನೇ ಕನ್ನಡ ವಿಜ್ಞಾನ ಸಮ್ಮೇಳನ’ಕ್ಕೆ ಮಂಗಳೂರು ರಾಮಕೃಷ್ಣ ಮಠದ ಶ್ರೀ ಜಿತಕಾಮಾನಂದ ಸ್ವಾಮೀಜಿ ಬುಧವಾರ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೊ.ಗೋಪಾಲನ್ ಜಗದೀಶ್ ಅವರಿಗೆ ಭಾರತ ರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಗೀತ ಸಾಧಕರಾದ ವಿದ್ಯಾಭೂಷಣ ಅವರಿಗೆ ಭಾರತ ರತ್ನ ಡಾ.ಭೀಮ ಸೇನ್ ಜೋಶಿ ಸಾಂಸ್ಕೃತಿಕ ವಿಜ್ಞಾನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಂಗಳೂರಿನ ಸಿಐಐಆರ್ಸಿಯ ನಿರ್ದೇಶಕ ಡಾ.ಕೃಷ್ಣ ವೆಂಕಟೇಶ್ ಅವರನ್ನು ಭಾರತ ರತ್ನ ಸಿಎನ್ಆರ್ ರಾವ್ ವಿಜ್ಞಾನ ಪ್ರಶಸ್ತಿಯೊಂದಿಗೆ ಪುರಸ್ಕರಿಸಲಾಯಿತು.
ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು. ಸ್ವದೇಶಿ ವಿಜ್ಞಾನ ಆಂದೋಳನ ಕರ್ನಾಟಕದ ಅಧ್ಯಕ್ಷ ಕ್ಯಾ.ಗಣೇಶ್ ಕಾರ್ಣಿಕ್, ಮಂಗಳೂರು ವಿವಿಯ ಕುಲಸಚಿವ ಡಾ.ಕಿಶೋರ್ ಕುಮಾರ್ ಸಿ.ಕೆ ಮೊದಲಾದವರು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಕನ್ನಡ ವಿಜ್ಞಾನ ಸಮ್ಮೇಳನವು ಶುಕ್ರವಾರ ಅಪರಾಹ್ನ ಮುಕ್ತಾಯಗೊಳ್ಳಲಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss