ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಯಮ್ಮ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಮತ್ತು ಎಂಟು ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೀಗ 16ನೇ ವಿಧಾನಸಭೆಯ ಮೊದಲ ದಿನದ ಅಧಿವೇಶನ ಆರಂಭವಾಗಿದೆ.
ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆ ಅವರು ಸದನದ ಕಾರ್ಯ ಕಲಾಪಗಳನ್ನು ನಡೆಸಿಕೊಡಲಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದ್ದಾರೆ.