ಉಪಹಾರ ಸೇವಿಸಿ 17 ವಿದ್ಯಾರ್ಥಿನಿಯರು ಅಸ್ವಸ್ಥ: ಪ್ರಾಂಶುಪಾಲರ ವಿರುದ್ಧ ಪೋಷಕರ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 17 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ.

ವಸತಿ ಶಾಲೆಯ ವಿದ್ಯಾರ್ಥಿಗಳು ಬೆಳಗ್ಗೆ ಉಪಹಾರ ಸೇವಿಸಿ ಏಕಾಏಕಿ ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿನಿಯರನ್ನು ಜೇವರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿಗಳು ವಿಷಾಹಾರ ಸೇವನೆಯಿಂದ ಬಳಲುತ್ತಿರುವ ಶಂಕೆ ವ್ಯಕ್ತವಾಗಿದೆ. ವಸತಿ ಶಾಲೆಯ ಮುಖ್ಯೋಪಾಧ್ಯಾಯ ವಿರುದ್ಧ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!