Friday, March 31, 2023

Latest Posts

BIG NEWS | ಶೇ.17 ರಷ್ಟು ವೇತನ ಹೆಚ್ಚಳ: ಮುಷ್ಕರ ವಾಪಸ್ ಪಡೆದ ಸರ್ಕಾರಿ ನೌಕರರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶೇ.17ರಷ್ಟು ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಇದನ್ನು ರಾಜ್ಯ ಸರ್ಕಾರಿ ನೌಕರರು ಒಪ್ಪಿದ್ದು ಅಂತಿಮವಾಗಿ ಮುಷ್ಕರವನ್ನು ಕೈಬಿಡಲಿದ್ದಾರೆ.

ಮುಖ್ಯಮಂತ್ರಿಗಳು ಮಾತಿನಲ್ಲಿ ಭರವಸೆ ನೀಡಿದರೆ ಸಾಲದು, ಅಧಿಕೃತ ಆದೇಶ ಹೊರಡಿಸದ ಹೊರತು ಮುಷ್ಕರ ಹಿಂಪಡೆಯುವುದಿಲ್ಲ ಎಂದು ಸರ್ಕಾರಿ ನೌಕರರು ಹೇಳಿದ್ದರು.

ಆದೇಶ ಪ್ರತಿ ಸಿಕ್ಕಿದ ನಂತರವಷ್ಟೇ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಷಡಕ್ಷರಿ ಹೇಳಿದ್ದು, ಇದೀಗ ಆದೇಶ ಹೊರಡಿಸಿದ್ದನ್ನು ಒಪ್ಪಿಕೊಂಡು ಮುಷ್ಕರವನ್ನು ಕೈಬಿಟ್ಟಿದ್ದಾರೆ.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ವಿಧಾನಸೌಧದಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಿದ್ದು, ಮುಷ್ಕರವನ್ನು ಕೈಬಿಟ್ಟಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!