ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 8349 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, 173 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಅದರಲ್ಲಿ ಬೆಂಗಳೂರಿನಲ್ಲಿಯೇ 82 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ರೇಟ್ ಶೇ. 2.07 ರಷ್ಟಿದ್ದು, ಒಟ್ಟು 702 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜೊತೆಗೆ 37 ಸೋಂಕಿತರು ಶುಕ್ರವಾರ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ದಾಖಲಾಗುತ್ತಿರುವ ಹೊಸ ಕೊರೋನಾ ಪ್ರಕರಣಗಳಲ್ಲಿ ಶೇ 90 ರಷ್ಟು ಒಮಿಕ್ರಾನ್ ರೂಪಾಂತರಿ JN.1 ಅಂಶ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ಹಿನ್ನಲೆ 197 ಸ್ಯಾಂಪಲ್ಸ್ಗಳನ್ನು ಜೀನೋಮ್ ಸೀಕ್ವೆನ್ಸಿಂಗ್ ಮಾಡಲು ಕಳುಹಿಸಲಾಗಿದೆ. ಸದ್ಯ ಬಂದಿರುವ 60 ಸ್ಯಾಂಪಲ್ಸ್ಗಳ ವರದಿ ಪ್ರಕಾರ ಶೇ.50 ರಷ್ಟು ರೋಗಿಗಳಲ್ಲಿ ಉಪತಳಿ JN.1 ರೋಗದ ಅಂಶಗಳು ಕಂಡು ಬಂದಿವೆ.