Saturday, July 2, 2022

Latest Posts

ರಾಜ್ಯದಲ್ಲಿ ಇಂದು 17,489 ಜನರಿಗೆ ಕೊರೋನಾ, 80 ಜನರು ಬಲಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿಂದು 17,489 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 11,41,998ಕ್ಕೆ ಏರಿಕೆಯಾಗಿದೆ.
ಇಂದು ಒಂದೇ ದಿನ ಕೊರೋನಾಗೆ 80 ಜನರ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಈವರೆಗೆ 13,270 ಜನರು ಸಾವನ್ನಪ್ಪಿದ್ದಾರೆ. ಇನ್ನು 5565 ಸೋಂಕಿತರು ಇಂದು ಗುಣಮುಖರಾಗಿದ್ದು, ಈ ಮೂಲಕ 10,09,549 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,19,160 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss