Sunday, June 4, 2023

Latest Posts

ಕಾಂಗೋದಲ್ಲಿ ಪ್ರಕೃತಿ ಉಗ್ರರೂಪ: 176 ಮಂದಿ ಸಾವು, 200ಕ್ಕೂ ಹೆಚ್ಚು ಜನ ನಾಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆಫ್ರಿಕಾದ ಕಾಂಗೋದಲ್ಲಿ ಪ್ರವಾಹ ಅವಾಂತರ ಸೃಷ್ಟಿಸಿದೆ. ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು,  ದಕ್ಷಿಣ ಕಿವು ಪ್ರಾಂತ್ಯದಲ್ಲಿ ನದಿಗಳು ತುಂಬಿ ಹರಿಯುತ್ತಿವೆ. ಇದರಿಂದಾಗಿ ಗ್ರಾಮಗಳು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿವೆ. ಪ್ರವಾಹದಿಂದಾಗಿ ಇದುವರೆಗೂ 176 ಜನರು ಸಾವನ್ನಪ್ಪಿದ್ದಾರೆ.

ಪ್ರವಾಹದಲ್ಲಿ 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದ, ಮನೆಗಳು, ಶಾಲೆಗಳು ಮತ್ತು ಆಸ್ಪತ್ರೆಗಳು ಪ್ರವಾಹಕ್ಕೆ ಕೊಚ್ಚಿಹೋಗಿವೆ. ಇರಲು ಮನೆ ಇಲ್ಲದೆ ಜನರು ನಿರಾಶ್ರಿತರಾಗಿದ್ದಾರೆ. ವಾಸವಾಗಲು ಸೂರಿಲ್ಲದೆ ಜನ ಬೀದಿ ಬದಿ ವಾಸಮಾಡುವ ಪರಿಸ್ಥಿತಿ ಬಂದೊದಗಿದೆ.

ದಕ್ಷಿಣ ಕಿವುವಿನಲ್ಲಿ ಪ್ರವಾಹ ಮತ್ತು ಭೂಕುಸಿತ ಸಾಮಾನ್ಯವಾಗಿವೆ ಎಂದು ಅಧಿಕಾರಿಗಳು ಹೇಳುತ್ತಾರೆ. 2014ರಲ್ಲೂ ಇದೇ ರೀತಿಯ ಪ್ರಕೃತಿ ವಿಕೋಪ ಸಂಭವಿಸಿತ್ತು ಎಂಬುದನ್ನು ನೆನಪಿಸಿಕೊಂಡರು. ಆ ಸಂದರ್ಭದಲ್ಲಿ ಮಹಾಮಳೆಗೆ ಏಳುನೂರಕ್ಕೂ ಹೆಚ್ಚು ಮನೆಗಳು ಕೊಚ್ಚಿ ಹೋಗಿದ್ದಾಗಿ ವಿಶ್ವಸಂಸ್ಥೆ ವರದಿ ಹೇಳಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!