ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂಗನವಾಡಿ ಮಕ್ಕಳ ಪೌಷ್ಟಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ 26 ಮಂದಿ ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾತನಾಡಿ, ಫೆಬ್ರವರಿ 15 ರಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಸಹಾಯಕ ಆಯುಕ್ತರು ಗೋದಾಮಿನ ಮೇಲೆ ದಾಳಿ ಮಾಡಿದ್ದರು. ಈ ವೇಳ ಮಕ್ಕಳ ಅಹಾರ, ಗರ್ಭಿಣಿಯರ ಆಹಾರವನ್ನು ಸಂಗ್ರಹ ಮಾಡಿದ್ದು ಪತ್ತೆಯಾಗಿತ್ತು. ಬಳಿಕ, ಅಧಿಕಾರಿಗಳು ಕಸಬಾಪೇಟೆ ಪೊಲೀಸ್ ಠಾಣೆಗೆ ದೂರು ನೀಡುದ್ದರು. ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದಾರೆ. ಗೋದಿ ರವ, ಹಾಲಿನ ಪುಡಿ, ಬೆಲ್ಲ, ಹೆಸರುಕಾಳು ಮತ್ತು ಅಕ್ಕಿ ಸೇರಿದಂತೆ ನಾಲ್ಕು ಲಕ್ಷ ಮೌಲ್ಯದ ಅಹಾರದ ಪಾಕೆಟ್ಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.
ಗೋದಾಮು ಮಾಲೀಕ ಹಾಗೂ ಬಾಡಿಗೆ ಪಡೆದುಕೊಂಡವರು ಸೇರಿ ಮೊದಲು ಎಂಟು ಜನರನ್ನು ವಶಕ್ಕೆ ಪಡೆಯಲಾಗಿತ್ತು. ಅವರಿಂದ ಮಾಹಿತಿ ಪಡೆದ ಬಳಿಕ ಸುಮಾರು 18 ಅಂಗನವಾಡಿಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ಆಹಾರ ಪಾಕೆಟ್ಗನ್ನು ಸಂಗ್ರಹಿಸಿರುವುದು ಕಂಡು ಬಂದಿದೆ. ಹೀಗಾಗಿ, 18 ಜನ ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ 26 ಜನರನ್ನು ಬಂಧಿಸಾಲಗಿದೆ ಎಂದು ಹೇಳಿದರು.