ಭಾರತದಲ್ಲಿ ತಯಾರಿಸಿದ ಕೆಮ್ಮು ಔಷಧಿಯಿಂದಾಗಿ 18 ಮಕ್ಕಳ ಸಾವು: ಉಜ್ಬೇಕಿಸ್ತಾನ ಆರೋಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉಜ್ಬೇಕಿಸ್ತಾನದಲ್ಲಿ ಭಾರತದ ಔಷಧೀಯ ಕಂಪನಿಯೊಂದು ತಯಾರಿಸಿದ ಕೆಮ್ಮಿನ ಔಷಧಿ ಸೇವಿಸಿ 18 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಆ ದೇಶದ ಆರೋಗ್ಯ ಸಚಿವಾಲಯ ಆರೋಪಿಸಿದೆ. ತೀವ್ರವಾದ ಉಸಿರಾಟದ ಕಾಯಿಲೆ ಹೊಂದಿರುವ 21 ಮಕ್ಕಳಲ್ಲಿ 18ಮಕ್ಕಳು Dak-1 ಮ್ಯಾಕ್ಸ್ ಸಿರಪ್ ಅನ್ನು ಸೇವಿಸಿದ ಮಕ್ಕಳು ಸಾವನ್ನಪ್ಪಿರುವುದಾಗಿ ಹೇಳಿದೆ. ಕೂಡಲೇ ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಭಾರತ ಸರ್ಕಾರ ಇದಕ್ಕೆ ಸಂಬಂಧಿಸಿದ ವಿವರಗಳನ್ನು ಸಲ್ಲಿಸುವಂತೆ ಉಜ್ಬೇಕಿಸ್ತಾನ್‌ಗೆ ತಿಳಿಸಲಾಗಿದೆ.

ಭಾರತೀಯ ನಿರ್ಮಿತ ಸಿರಪ್ ಕುಡಿದು ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿ ಬಂದ ಎರಡನೇ ಘಟನೆ ಇದಾಗಿದೆ. ಕೆಲ ತಿಂಗಳ ಹಿಂದೆ ಆಫ್ರಿಕಾದ ಗ್ಯಾಂಬಿಯಾದಲ್ಲಿ ಹರಿಯಾಣದ ಮೇಡನ್ ಫಾರ್ಮಾಸ್ಯುಟಿಕಲ್ಸ್ ತಯಾರಿಸಿದ ಕೆಮ್ಮಿನ ಔಷಧಿ ಕುಡಿದು 70ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ ಸುದ್ದಿಯಾಗಿತ್ತು. ವಿಶ್ವ ಆರೋಗ್ಯ ಸಂಸ್ಥೆ ಕೂಡ ಈ ಸಿರಪ್ ಅನ್ನು ಯಾರೂ ಬಳಸಬಾರದು ಎಂದು ಎಚ್ಚರಿಕೆ ನೀಡಿದೆ. ಆದರೆ, ಆ ಸಿರಪ್‌ ಭಾರತದಲ್ಲಿ ಮಾರಟವಾದುದ್ದಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿತ್ತು.

ಇತ್ತೀಚಿನ ಘಟನೆಯಿಂದಾಗಿ, ಉಜ್ಬೇಕಿಸ್ತಾನ್‌ನಲ್ಲಿ ಡಾಕ್-1 ಮ್ಯಾಕ್ಸ್ ಮಾತ್ರೆಗಳು ಮತ್ತು ಸಿರಪ್‌ಗಳನ್ನು ನಿಷೇಧಿಸಲಾಗಿದೆ. ಆದರೆ, ಈ ಸಿರಪ್ ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿಲ್ಲ ಎಂದು ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್‌ಸಿಒ) ಮೂಲಗಳು ಬಹಿರಂಗಪಡಿಸಿವೆ. ಆದಾಗ್ಯೂ, ಸಿಡಿಎಸ್ಒ ಉತ್ತರ ವಲಯ ಮತ್ತು ಯುಪಿ ಡ್ರಗ್ಸ್ ಕಂಟ್ರೋಲಿಂಗ್ ಮತ್ತು ಲೈನಿಂಗ್ಸ್ ಅಥಾರಿಟಿ ತಂಡಗಳು ಘಟನೆಯ ಕುರಿತು ಜಂಟಿಯಾಗಿ ತನಿಖೆ ನಡೆಸುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!