Sunday, December 3, 2023

Latest Posts

ಭೀಕರ ಬಸ್ ಅಪಘಾತ: 18 ವಲಸಿಗರು ಸಾವು‌, ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭೀಕರ ಬಸ್‌ ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ದುರಂತ ಘಟನೆ ಮೆಕ್ಸಿಕನ್ ರಾಜ್ಯದ ಓಕ್ಸಾಕಾದಲ್ಲಿ ಶುಕ್ರವಾರದಂದು ನಡೆದಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ.

ಓಕ್ಸಾಕಾ – ಕ್ವಾಕ್ನೋಪಾಲನ್ ಹೆದ್ದಾರಿಯ ತಿರುವಿನಲ್ಲಿ ಬಸ್‌ ಪಲ್ಟಿಯಾಗಿದೆ. ಇದರ ಪರಿಣಾಮ 18 ಜನ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ.

ಈ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಹುತೇಕ ಪ್ರಯಾಣಿಕರು ವಲಸಿಗರು ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಮೃತರ ಪೈಕಿ ಮೂವರು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ. ಇವರೆಲ್ಲರೂ ವೆನೆಜುವೆಲಾ ಮತ್ತು ಹೈಟಿಯಿಂದ ಬಂದವರು ಎಂದು ಓಕ್ಸಾಕಾ ರಾಜ್ಯದ ಅಟಾರ್ನಿ ಜನರಲ್ ತಿಳಿಸಿದ್ದಾರೆ.

ಅಪಘಾತದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ, ತನಿಖೆಯ ಬಳಿಕವಷ್ಟೇ ಮಾಹಿತಿ ಹೊರಬೀಳಲಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!