ಸಿಎಎ ಜಾರಿ ಬೆನ್ನಿಗೇ ಪಾಕಿಸ್ತಾನದಿಂದ ನಿರಾಶ್ರಿತರಾಗಿ ಬಂದಿದ್ದ 18 ಹಿಂದುಗಳಿಗೆ ಭಾರತೀಯ ಪೌರತ್ವ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ಥಾನ ಮೂಲದ 18 ಮಂದಿ ಹಿಂದು ನಿರಾಶ್ರಿತರಿಗೆ ಗುರಾತ್‌ನ ಅಹಮದಾಬಾದ್‌ನಲ್ಲಿ ಭಾರತೀಯ ಪೌರತ್ವ ಪ್ರದಾನ ಮಾಡಲಾಗಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ವಿಶೇಷ ಶಿಬಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುಜರಾತ್ ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘವಿ ಈ ನಿರಾಶ್ರಿತರಿಗೆ ಪೌರತ್ವ ನೀಡಿದರು.
2016 ಮತ್ತು 2018ರ ಗೆಜೆಟ್ ಅಧಿಸೂಚನೆಯ ಪ್ರಕಾರ, ಗುಜರಾತ್‌ನ ಅಹಮದಾಬಾದ್, ಗಾಂಧಿನಗರ ಮತ್ತು ಕಚ್‌ನ ಜಿಲ್ಲಾಧಿಕಾರಿಗಳು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರಿಗೆ ಭಾರತೀಯ ಪೌರತ್ವವನ್ನು ನೀಡಲು ಅಧಿಕಾರ ಹೊಂದಿದ್ದಾರೆ. ಇದುವರೆಗೆ 1167 ಜನರಿಗೆ ಪೌರತ್ವ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!