ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಡಾಬಾ ಬಳಿ ನಿಂತಿದ್ದ ಬಸ್ ಗೆ ಟ್ರಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ 18 ಮಂದಿ ಮೃತಪಟ್ಟಿದ್ದಾರೆ. ಈ ದುರ್ಘಟನೆ ಉತ್ತರಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ.
ಜಿಲ್ಲೆಯ ರಾಮ್ ಸ್ನೆಹೈಮತ್ ಪೊಲೀಸ್ ಠಾಣೆ ವ್ಯಾಪ್ತಿಯ ಲಕ್ನೋ-ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ತಡರಾತ್ರಿ ಈ ಘಟನೆ ಸಂಭವಿಸಿದೆ.
ಪಲ್ವಲ್ ನಿಂದ ಬಿಹಾರಕ್ಕೆ ಕಾರ್ಮಿಕರಿದ್ದ ಬಸ್ ತೆರಳುತ್ತಿದ್ದು, ಡಾಬಾ ಬಳಿ ಊಟಕ್ಕೆ ನಿಲ್ಲಿಸಲಾಗಿತ್ತು. ಇದೇ ವೇಳೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ 18 ಜನ ಮೃತಪಟ್ಟಿದ್ದು, 19 ಮಂದಿ ಗಾಯ ಗಾಯಗೊಂಡಿದ್ದು,
ಗಾಯಾಳುಗಳನ್ನು ಲಕ್ನೋ ಟ್ರಾಮಾ ಕೇಂದ್ರಕ್ಕೆ ದಾಖಲಿಸಲಾಗಿದೆ. ಬಸ್ನ ಕೆಳಗೆ ಸಿಲುಕಿರುವ ಮೃತ ದೇಹಗಳನ್ನು ಹೊರತೆಗೆಯಲು ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಲಕ್ನೋ ವಲಯ ಎಡಿಜಿ ಸತ್ಯನಾರಾಯಣ್ ಸಬತ್ ತಿಳಿಸಿದ್ದಾರೆ.