ಮದ್ರಾಸ್‌ ಐಐಟಿಯಲ್ಲಿ ಕೊರೊನಾ ಅಬ್ಬರ: ಇಂದು 18ವಿದ್ಯಾರ್ಥಿಗಳಿಗೆ ಸೋಂಕು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮದ್ರಾಸ್ ಐಐಟಿ ಕ್ಯಾಂಪಸ್‌ನಲ್ಲಿ ಕೊರೊನಾ ಅಬ್ಬರ ಶುರುವಾಗಿದೆ. ತಮಿಳುನಾಡಿನ ಐಐಟಿ ಇಂದು 18 ವಿದ್ಯಾರ್ಥಿಗಳಿಗೆ ಕರೋನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಇದು ಕ್ಯಾಂಪಸ್‌ನಲ್ಲಿ ಒಟ್ಟು ಕರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯನ್ನು 30 ಕ್ಕೆ ಏರಿದೆ. ಐಐಟಿ ಕ್ಯಾಂಪಸ್‌ನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಳಿದ ಎಲ್ಲ ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ನಡೆಸಲು ಐಐಟಿ ಅಧಿಕಾರಿಗಳು ನಿರ್ಧರಿಸಿದ್ದಾರೆ.

ಮೂರು ದಿನಗಳ ಹಿಂದೆ ಐಐಟಿ ಕ್ಯಾಂಪಸ್‌ನಲ್ಲಿ ಮೂವರು ವಿದ್ಯಾರ್ಥಿಗಳಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದವು. ಮೂವರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದೀಗ ಎರಡು ದಿನಗಳಲ್ಲಿ ಮೂವತ್ತು ಮಂದಿಗೆ ಸೋಂಕು ತಗುಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ತಮಿಳುನಾಡು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಾಗರೂಕರಾಗಿರಬೇಕು ಎಂದು ಅಧಿಕಾರಿಗಳು ಒತ್ತಾಯಿಸಿದ್ದಾರೆ. ಯಾರೂ ಮಾಸ್ಕ್ ಧರಿಸದೆ ಹೊರಗೆ ಬರಬೇಡಿ, ಕೊರೊನಾ ನಿಯಮಗಳನ್ನು ಪಾಲಿಸುವಂತೆ ವೈದ್ಯರು ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!