ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 18 ರೋಗಿಗಳು ಸಾವು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ವಾ ಎಂಬಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಸ್ಮರಣಾರ್ಥ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 18 ರೋಗಿಗಳು ಸಾವನ್ನಪ್ಪಿದ್ದಾರೆ.
ಕಳೆದ ಆಗಸ್ಟ್‌ 10 ರಂದೂ ಕೂಡಾ ಒಂದೇ ದಿನ ಐವರು ರೋಗಿಗಳು ಸಾವನ್ನಪ್ಪಿದ್ದರು. ಇ

ಮೃತರ ಪೈಕಿ 6 ರೋಗಿಗಳು ಥಾಣೆ ಜಿಲ್ಲೆಯ ಮೂಲದವರು. ಇನ್ನು 6 ರೋಗಿಗಳು ಕಲ್ಯಾಣ್ ಜಿಲ್ಲೆಯ ವಿವಿಧ ಆಸ್ಪತ್ರೆಗಳಿಂದ ಈ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಾಗಿದ್ದರು.ಈ ಘಟನೆ ಕುರಿತಾಗಿ ಮಹಾರಾಷ್ಟ್ರ ರಾಜ್ಯ ಸರ್ಕಾರವು ಉನ್ನತ ಮಟ್ಟದ ತನಿಖೆ ನಡೆಸಲು ಸಮಿತಿಯನ್ನು ನೇಮಿಸಿದೆ. ಈಗಾಗಲೇ ಈ ಸಮಿತಿಯ ತನಿಖೆ ಶುರುವಾಗಿದೆ.

ಮೃತರ ಪೈಕಿ 6 ರೋಗಿಗಳು ಆಸ್ಪತ್ರೆಗೆ ದಾಖಲಾದ 24 ಗಂಟೆಗಳ ಒಳಗೇ ಸಾವನ್ನಪ್ಪಿದ್ದಾರೆ. ರೋಗಿಗಳ ಸಾವಿಗೆ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಮೃತ ರೋಗಿಗಳ ಸಂಬಂಧಿಕರು ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದ್ರೆ, ಆಸ್ಪತ್ರೆ ಆಡಳಿತ ಮಂಡಳಿ ಮಾತ್ರ ಈ ಆರೋಪವನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ.

ಇನ್ನು ಆಸ್ಪತ್ರೆ ಸಿಬ್ಬಂದಿ ನಮ್ಮ ಮನವಿಗಳನ್ನು ನಿರ್ಲಕ್ಷ್ಯ ಮಾಡುತ್ತಾರೆ, ಬೇಜವಾಬ್ದಾರಿ ಧೋರಣೆ ಅನುಸರಿಸುತ್ತಾರೆ ಎಂದು ಮೃತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಪ್ರೀತಿ ಪಾತ್ರರು ಐಸಿಯುನಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಸಾವನ್ನಪ್ಪುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಎಲ್ಲಕ್ಕಿಂತಾ ಹೆಚ್ಚಾಗಿ ಗಂಭೀರ ಸ್ವರೂಪದ ಆರೋಗ್ಯ ಸಮಸ್ಯೆಗಳೊಂದಿಗೆ ಆಸ್ಪತ್ರೆಗೆ ಬಂದರೂ ರೋಗಿಗಳನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ನೀಡೋದಕ್ಕೇ ಸಾಕಷ್ಟು ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ದೊಡ್ಡ ಪ್ರಮಾಣದಲ್ಲಿ ರೋಗಿಗಳು ಆಸ್ಪತ್ರೆಗೆ ಬಂದಾಗ ಎಲ್ಲರಿಗೂ ಸೂಕ್ತ ಚಿಕಿತ್ಸೆ ನೀಡಲು ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿ ಹಾಗೂ ಸೇವಾ ಸಿಬ್ಬಂದಿಯ ಕೊರತೆ ಇದೆ. ಬೆಡ್, ಐಸಿಯು, ಆಕ್ಸಿಜನ್ ಸೇರಿದಂತೆ ಹಲವು ಕೊರತೆಗಳೂ ಇವೆ. ಹೀಗಾಗಿ, ರೋಗಿಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲು ತಾವು ಬೇಜವಾಬ್ದಾರಿ ತೋರುತ್ತಿಲ್ಲ, ಸಿಬ್ಬಂದಿ ಕೊರತೆ ಎದುರಿಸುತ್ತಿದ್ದೇವೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!