ವಿಜಯನಗರದಲ್ಲಿ ಕಲುಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿಜಯನಗರದ ಹೊಸಪೇಟೆ ತಾಲೂಕಿನ ನಲ್ಲಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥರಾಗಿದ್ದಾರೆ.

ಪೈಪ್‌ಲೈನ್‌ ಮೂಲಕವೇ ಕಲುಷಿತ ನೀರು ಸಪ್ಲೇ ಆಗಿದ್ದು, ಅದನ್ನು ಕುಡಿದಿದ್ದೇವೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಅಸ್ವಸ್ಥರಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಜಿಲ್ಲಾ ಪಂಚಾಯತ್‌ ಸಿಇಒ ಸದಾಶಿವ ಪ್ರಭು ಹಾಗೂ ಜಿಲ್ಲಾ ಆರೋಗ್ಯಾಧಕಾರಿ ಶಂಕರ್‌ ನಾಯ್ಡು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೀರಿನ ಸ್ಯಾಂಪಲ್‌ನ್ನು ಪರಿಶೀಲನೆಗೆ ಕಳುಹಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!