ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಚಿಕ್ಕಬಳ್ಳಾಪುರದಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ 18 ವರ್ಷದ ಯುವತಿ ಸಾವನ್ನಪ್ಪಿದ್ದಾಳೆ.
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದ ನಿವಾಸಿ ಯಶಸ್ವಿನಿ (18) ಮೃತ ಯುವತಿ. ಯುವತಿಗೆ ಒಂದು ವಾರದಿಂದ ತೀವ್ರ ಜ್ವರವಿತ್ತು.
ಯುವತಿಯನ್ನು ಗೌರಿಬಿದನೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಯುವತಿಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಸಾವನ್ನಪ್ಪಿದ್ದಾಳೆ.